ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು: ಕಾರಿನಲ್ಲಿ ಗ್ರಾಮ ಪಂಚಾಯಿತಿ ಸದಸ್ಯನ ಶವ ಪತ್ತೆ

33 ವರ್ಷದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರ ಶವ ಕಾರಿನಲ್ಲಿ ಪತ್ತೆಯಾಗಿದೆ.. ಕೆ.ಆರ್.ನಗರ ತಾಲೂಕಿನ ಹನಸೋಗೆ ಗ್ರಾಮ ಪಂಚಾಯಿತಿ ಸದಸ್ಯ ಅಶೋಕ  ಮೃತ ವ್ಯಕ್ತಿ .

ಮೈಸೂರು: 33 ವರ್ಷದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರ ಶವ ಕಾರಿನಲ್ಲಿ ಪತ್ತೆಯಾಗಿದೆ.. ಕೆ.ಆರ್.ನಗರ ತಾಲೂಕಿನ ಹನಸೋಗೆ ಗ್ರಾಮ ಪಂಚಾಯಿತಿ ಸದಸ್ಯ ಅಶೋಕ  ಮೃತ ವ್ಯಕ್ತಿ .

ಪಿರಿಯಾಪಟ್ಟಣದ ಕಾರು ರಾವಂದೂರು -ಅತ್ತಿಗೋಡು ರಸ್ತೆಯ ಬದಿಯಲ್ಲಿ ಕಾರು ನಿಂತಿದ್ದು, ಸ್ಥಳೀಯರು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಸ್ಥಳಕ್ಕೆ ಬಂದು ಕಾರ್‌ನ ಗ್ಲಾಸ್‌ ಒಡೆದು ನೋಡಿದಾಗ ಒಳಗಿದ್ದ ವ್ಯಕ್ತಿ ಕುಳಿತ ಸ್ಥಿತಿಯಲ್ಲೇ ಮೃತಪಟ್ಟಿರುವುದು ಕಂಡುಬಂದಿದೆ.

ಕಾರ್‌ನಲ್ಲಿ ಇದ್ದ ಪೋನ್‌ ನಂಬರ್‌ಗಳಿಗೆ ಕರೆ ಮಾಡಿ ವಿಚಾರಿಸಿದಾಗ ಇವರು ಗ್ರಾಪಂ ಸದಸ್ಯ ಅಶೋಕ್‌ ಎಂಬುದು ತಿಳಿದುಬಂದಿದ್ದು, ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ. 

ಮಾಜಿ  ಸಚಿವ ಸಾ.ರಾ ಮಹೇಶ್ ಅವರ ಹಿಂಬಾಲಕರಾಗಿದ್ದ ಅಶೋಕ್, ಚುಂಚನಕಟ್ಟೆ ಹೋಬಳಿ ಜೆಡಿಎಸ್ ಯುವ ಘಟಕದ ಅಧ್ಯಕ್ಷರೂ ಆಗಿದ್ದರು.

ಇವರು ಮೂಲತಃ ಕೆ.ಆರ್‌.ನಗರ ತಾಲೂಕು ಹೊಳೆತಂದ್ರೆ ಗ್ರಾಮದವರಾಗಿದ್ದಾರೆ. ಪಿರಿಯಾಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾವಿಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

SCROLL FOR NEXT