ರಾಜ್ಯ

ಉಪಚುನಾವಣೆ ಘೋಷಣೆ ಬೆನ್ನಲ್ಲೇ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸುಧಾಕರ್ ರಾಜೀನಾಮೆ!

Raghavendra Adiga

ಬೆಂಗಳೂರು: ಚಿಕ್ಕಬಳ್ಳಾಪುರ ಅನರ್ಹ ಶಾಸಕ ಡಾ.ಕೆ. ಸುಧಾಕರ್ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರನ್ನು ಭೇಟಿಯಾಗಿ ಸುಧಾಕರ್ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದ್ದಾಗ ಸುಧಾಕರ್ ಅವರನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.

ಪ್ರಾರಂಭದಲ್ಲಿ ಅಂದಿನ ಮುಖ್ಯಂಅತ್ರಿ ಎಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ಶಾಸಕರ ನೇಮಕಕ್ಕೆ ಹಿಂದೇಟು ಹಾಕಿದ್ದರು. ಆದರೆ ಸುಧಾಕರ್ ಬಂಡಾಯವೇಳುವುದು ಖಚಿತವಾಗುತ್ತಿದ್ದಂತೆ ಅವರನ್ನು ಮಂಡಳಿ ಅಧ್ಯಕ್ಷರನ್ನಾಗಿ ಮಾಡಿದ್ದರು. ಈ ನಡುವೆ ಸುಧಾಕರ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದ ವಿಚಾರ ಹೈಕೋರ್ಟ್ ಮೆಟ್ಟಿಲೇರಿತ್ತು. ಸುಧಾಕರ್ ನೇಮಕ ಪ್ರಶ್ನಿಸಿ  ಚಿಕ್ಕಬಳ್ಳಾಪುರದವರೇ ಆದ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್‌.ಆಂಜನೇಯ ರೆಡ್ಡಿ ಹೈಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಸಿದ್ದರು. ಅದಕ್ಕೆ ಸಂಬಂಧಿಸಿ ಕೋರ್ಟ್ ಸಹ ಸುಧಾಕರ್ ನೇಮಕ ನಿಯಮಬಾಹಿರವಾಗಿದೆ ಎಂದು ತೀರ್ಪು ನೀಡಿತ್ತು

ಇದೀಗ ಅನರ್ಹ ಶಾಸಕ ಸುಧಾಕರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

SCROLL FOR NEXT