ರಾಜ್ಯ

ಸುಪ್ರೀಂ ಕೋರ್ಟ್'ನಲ್ಲಿ ಮಹತ್ವದ ವಿಚಾರಣೆ: ಅನರ್ಹ ಶಾಸಕರ ಎದೆಯಲ್ಲಿ ಶುರುವಾಗಿದೆ ಢವಢವ

Manjula VN

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅತ್ಯಂತ ಮಹತ್ವದ್ದಾಗಿರುವ 17 ಮಂದಿ ಅನರ್ಹ ಶಾಸಕರು ತಮ್ಮ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸುಪ್ರೀಂಕೋರ್ಟ್'ನಲ್ಲಿ ಸೋಮವಾರ ವಿಚಾರಣೆಗೆ ಬರಲಿದೆ. 

17ರಲ್ಲಿ 15 ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಈಗಾಗಲೇ ಚುನಾವಣೆ ಆಯೋಗ ಉಪ ಚುನಾವಣೆ ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ನ್ಯಾಯಾಲಯದ ತೀರ್ಪು ಅತ್ಯಂತ ಮಹತ್ವದ್ದಾಗಿದ್ದು, ತೀರ್ಪು ಕುರಿತು ಈಗಾಗಲೇ ಅನರ್ಹ ಶಾಸಕರಲ್ಲಿ ಆತಂಕ ಶುರುವಾಗಿದೆ. 

ಪ್ರಕರಣದಲ್ಲಿ ನ್ಯಾಯಾಲಯವು ಯಾವುದೇ ಆದೇಶ ನೀಡಿದರೂ ಅಥವಾ ವಿಚಾರಣೆ ಮುಂದೂಡಿದರೂ ಅದು 15 ಕ್ಷೇತ್ರಗಳ ಉಪ ಚುನಾವಣೆ ಮೇಲೆ ನೇರ ಪರಿಣಾಮ ಬೀರಲಿದೆ. ಒಂದು ವೇಳೆ ಸ್ಪೀಕರ್ ನಿರ್ಧಾರವನ್ನು ನ್ಯಾಯಾಲಯ ಎತ್ತಿಹಿಡಿದರೆ, ಅನರ್ಹ ಶಾಸಕರ ಭವಿಷ್ಯ ಸಂಕಷ್ಟಕ್ಕೆ ಸಿಲುಕಲಿದೆ. 

ಒಂದು ವೇಳೆ ಅನರ್ಹತೆಯನ್ನೇ ರದ್ದು ಮಾಡಿದರೆ ಮುಂಬರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹ ಶಾಸಕರಿಗೆ ಅವಕಾಶ ಸಿಕ್ಕಂತಾಗಲಿದೆ. 

SCROLL FOR NEXT