ರಾಜ್ಯ

ಬಿಬಿಎಂಪಿ ಮೇಯರ್, ಉಪ ಮೇಯರ್ ಚುನಾವಣೆ ಅಕ್ಟೋಬರ್ 1ಕ್ಕೆ ಮುಂದೂಡಿಕೆ

Lingaraj Badiger

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಮೇಯರ್ ಮತ್ತು ಉಪಮೇಯರ್ ಸ್ಥಾನಕ್ಕೆ ಸೆಪ್ಟೆಂಬರ್ 27ರಂದು ನಿಗದಿಯಾಗಿದ್ದ ಚುನಾವಣೆಯನ್ನು ಅಕ್ಟೋಬರ್ 1ಕ್ಕೆ ಮುಂದೂಡಲಾಗಿದೆ.
  
ಈ ಕುರಿತು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಹರ್ಷಗುಪ್ತ ಅವರು ಪ್ರಕಟಣೆ ನೀಡಿದ್ದು, ಅಕ್ಟೋಬರ್ 1ರಂದು ಮೇಯರ್, ಉಪಮೇಯರ್ ಮತ್ತು 12 ಸ್ಥಾಯಿ ಸಮಿತಿಗಳ ಸದಸ್ಯ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದೆ ಎಂದು ತಿಳಿಸಿದ್ದಾರೆ.

ಹಾಲಿ ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್ ಹಾಗೂ ಉಪಮೇಯರ್‌ ಭದ್ರೇಗೌಡ ಅವರ ಅಧಿಕಾರಾವಧಿ ಸೆಪ್ಟಂಬರ್‌ 28ಕ್ಕೆ ಮುಗಿಯಲಿದೆ. ಈಗಾಗಲೇ ಚುನಾವಣೆಗೆ ಮತದಾರ ಪಟ್ಟಿ ಸಿದ್ಧಗೊಂಡಿದೆ. ಈ ಬಾರಿಯ ಚುನಾವಣೆಗೆ ಒಟ್ಟು 257 ಮತದಾರರಿದ್ದು, ಯಾವುದೇ ಪಕ್ಷ ಗೆಲ್ಲಲು 128 ಮತಗಳು ಬೇಕಾಗುತ್ತದೆ.

ಸರ್ಕಾರ ಬದಲಾಗಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದರಿಂದ ಈ ಬಾರಿ ಬಿಜೆಪಿ ಪಾಲಿಕೆ ಅಧಿಕಾರ ಹಿಡಿಯಲು ಸರ್ವ ಪ್ರಯತ್ನ ನಡೆಸುತ್ತಿದೆ. ಏಳು ಜನ ಪಕ್ಷೇತರ ಸದಸ್ಯರ ಪೈಕಿ ಕನಿಷ್ಠ ನಾಲ್ವರು ಸದಸ್ಯರ ಬೆಂಬಲ ಅಗತ್ಯವಾಗಿದೆ. ಬಿಇಜೆಪಿ ಅಧಿಕಾರ ಹಿಡಿಯುವುದು ಬಹುತೇಕ ಖಚಿತ ಎನ್ನುವ ಮಾತುಗಳು ಕೇಳಿಬರುತ್ತಿವೆ.

SCROLL FOR NEXT