ರಾಜ್ಯ

ಯುವಕರಿಗೆ ಕೌಶಲ್ಯ ತರಬೇತಿ ಅತ್ಯಗತ್ಯ: ವೆಂಕಯ್ಯ ನಾಯ್ಡು

Shilpa D

ಬೆಂಗಳೂರು: ದೇಶಾದ್ಯಂತ ಗ್ರಾಮೀಣ ಪ್ರದೇಶದ ಯುವಕರಿಗೆ ಕೌಶಲ್ಯ ತರಬೇತಿ ನೀಡುವ ಮೂಲಕ ಅವರಿಗೆ ಅವಕಾಶಗಳನ್ನು ಕಲ್ಪಿಸುವಂತಾಗಬೇಕು ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಹೇಳಿದ್ದಾರೆ. 

ಬುಧವಾರ ಜಿಕೆವಿಕೆಯಲ್ಲಿ ಆಯೋಜಿಸಿದ್ದ ಎನ್ ಐಪಿಎಂ ಅಂತರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಿಗೆ ವಲಸೆ ಹೋಗುತ್ತಿದ್ದಾರೆ, ಇದನ್ನು ತಡೆಯಲು ಮತ್ತು ಸ್ಥಳೀಯವಾಗಿ ಉದ್ಯೋಗ ಕಲ್ಪಿಸಿಕೊಡಲು ಅವರಿಗೆ ಕೌಶಲ್ಯ ತರಬೇತಿ ನೀಡುವ ಅಗತ್ಯವಿದೆ ಎಂದು ಹೇಳಿದ್ದಾರೆ.

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಯುವಜನರಿಗೆ ಹಾಗೂ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ಹೆಚ್ಚಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿವೆ, ಆದರೆ ಇದು ಇಷ್ಟಕ್ಕೆ ಸೀಮಿತವಾಗಬಾರದು. ಸಂಘ ಸೇವಾ ಸಂಸ್ಥಗಳು ತಮ್ಮ ಕರ್ತವ್ಯವನ್ನು ಅರಿತು, ಕೌಶಲ್ಯ ವೃದ್ಧಿಸಲು ಮುಂದಾಗಬೇಕು ಎಂದು ಕರೆ ನೀಡಿದ್ದಾರೆ.
 

SCROLL FOR NEXT