ಸಿಎಂ ಬಿಎಸ್ ಯಡಿಯೂರಪ್ಪ (ಸಂಗ್ರಹ ಚಿತ್ರ) 
ರಾಜ್ಯ

ಇಂದು ಅಥವಾ ನಾಳೆ ಕೇಂದ್ರದಿಂದ ನೆರೆ ಪರಿಹಾರ ಬಿಡುಗಡೆ: ಬಿ.ಎಸ್. ಯಡಿಯೂರಪ್ಪ

ಇಂದು ಇಲ್ಲವೇ ನಾಳೆ ಕೇಂದ್ರದಿಂದ ನೆರೆ ಪರಿಹಾರ ಬಿಡುಗಡೆಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಬೆಂಗಳೂರು: ಇಂದು ಇಲ್ಲವೇ ನಾಳೆ ಕೇಂದ್ರದಿಂದ ನೆರೆ ಪರಿಹಾರ ಬಿಡುಗಡೆಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಡಾಲರ್ಸ್ ಕಾಲೋನಿ ನಿವಾಸದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಪರಿಹಾರ ವಿಚಾರವಾಗಿ ಸಂಸದ ಪ್ರಹ್ಲಾದ್ ಜೋಷಿ ತಮ್ಮನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಕರ್ನಾಟಕವೂ ಸೇರಿದಂತೆ ದೇಶದ ನಾಲ್ಕೈದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಒಟ್ಟಿಗೆ ಪರಿಹಾರ ಘೋಷಣೆ ಮಾಡಲಿದೆ ಎಂದರು.

ಚುನಾವಣಾ ಆಯೋಗ 15 ಕ್ಷೇತ್ರಗಳ ಉಪಚುನಾವಣೆಗೆ ಮತ್ತೆ ದಿನಾಂಕ ಘೋಷಣೆ ಮಾಡಿದೆ. ಚುನಾವಣೆ ಸಂಬಂಧ ಪಕ್ಷದ ಮುಖಂಡರ ಜೊತೆ ಚರ್ಚಿಸಲಾಗುತ್ತಿದೆ. ಪಕ್ಷ ಚುನಾವಣೆ ಎದುರಿಸಲು‌ ಸಿದ್ಧವಿದೆ ಎಂದು ತಿಳಿಸಿದರು.

ಅಕ್ಟೋಬರ್ 3 ರಂದು‌ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ವಿಜಯನಗರ ಜಿಲ್ಲಾ ರಚನೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆಯಾಗಲಿದೆ. ಬಳ್ಳಾರಿ ಜಿಲ್ಲೆ ವಿಭಜನೆ ಸಂಬಂಧ ಜಿಲ್ಲೆಯ ಪಕ್ಷದ ನಾಯಕರನ್ನೆಲ್ಲ ಕರೆದು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು