ರಾಜ್ಯ

ಮೈಸೂರು ದಸರಾಗೆ ಆಗಮಿಸುವ ಹೊರ ರಾಜ್ಯದ ವಾಹನಗಳಿಗೆ ತೆರಿಗೆ ವಿನಾಯಿತಿ

Lingaraj Badiger

ಮೈಸೂರು: ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವ ಹೊರ ರಾಜ್ಯಗಳ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡಲು ನಿರ್ಧರಿಸಿದರೆ.

ಸೆಪ್ಟೆಂಬರ್ 29ರಿಂದ ಅಕ್ಟೋಬರ್ 9ರ ತನಕ ಮೈಸೂರು ಪ್ರವೇಶಿಸುವ ಹೊರ ರಾಜ್ಯಗಳ ವಾಹನಗಳಿಗೆ ತೆರಿಗೆ ಕಟ್ಟುವುದರಿಂದ ವಿನಾಯಿತಿ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಕರ್ನಾಟಕ ಮೋಟಾರು ವಾಹನ ತೆರಿಗೆ ಅಧಿನಿಯಮ 1957 (ಕರ್ನಾಟಕ ಕಾಯಿದೆ 35/1957) ಕಲಂ 16 (1) ರ ಅಡಿಯಲ್ಲಿಸಾರ್ವಜನಿಕರ ಹಿತದೃಷ್ಟಿಯಿಂದ ಕರ್ನಾಟಕ ಹೊರತುಪಡಿಸಿ ಇತರೆ ರಾಜ್ಯಗಳಲ್ಲಿ ನೋಂದಾಯಿತ ಮತ್ತು ಆ ರಾಜ್ಯಗಳಲ್ಲಿ ತೆರಿಗೆ ಪಾವತಿಸಿರುವ ವಾಹನಗಳಿಗೆ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲು ಸರ್ಕಾರ ತೀರ್ಮಾನಿಸಿದೆ.

ಇತರೆ ರಾಜ್ಯದ ವಾಹನಗಳು ಮೋಟಾರು ವಾಹನ ಕಾಯಿದೆ 1988ರ ಸೆಕ್ಷನ್‌ 88ರ ಸಬ್‌ ಸೆಕ್ಷನ್‌ 8ರ (ಕೇಂದ್ರ ಕಾಯಿದೆ 59/88) ಅನುಸಾರ ವಿಶೇಷ ರಹದಾರಿ ಪಡೆದು ಸೆ.29ರಿಂದ ಅ.9ರವರೆಗೆ ಕರ್ನಾಟಕ ರಾಜ್ಯದ ಮೈಸೂರು ಜಿಲ್ಲೆಗೆ ಮಾತ್ರ ಅನ್ವಯಿಸುವಂತೆ ದಸರಾ ಪ್ರಯುಕ್ತ ಹೊರ ರಾಜ್ಯಗಳಿಂದ ಆಗಮಿಸುವ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

SCROLL FOR NEXT