ಮೈಸೂರಿನ ಕಲಾಮಂದಿರ ಆವರಣದಲ್ಲಿ ಮಹಿಷ ಮೂರ್ತಿಯನ್ನು ಅಲಂಕರಿಸುತ್ತಿರುವ ಕಾರ್ಯಕ್ರಮ ಆಯೋಜಕರು 
ರಾಜ್ಯ

ವಿವಾದಕ್ಕೆ ಎಡೆಮಾಡಿದ ಮಹಿಷ ದಸರಾ; ಚಾಮುಂಡಿ ಬೆಟ್ಟದಲ್ಲಿ ಕಾರ್ಯಕ್ರಮ ರದ್ದು 

ಪ್ರಗತಿಪರ, ದಲಿತ ಸಂಘಟನೆಗಳು ಮತ್ತು ಬುದ್ದಿಜೀವಿಗಳು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಚರಿಸಲುದ್ದೇಶಿಸಿದ್ದ ಮಹಿಷ ದಸರಾ ತೀವ್ರ ವಿವಾದಕ್ಕೆ ಕಾರಣವಾಗಿ ಜಿಲ್ಲಾಡಳಿತ ಚಾಮುಂಡಿ ಬೆಟ್ಟ ಮತ್ತು ಟೌನ್ ಹಾಲ್ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿದೆ.  

ಮೈಸೂರು: ಪ್ರಗತಿಪರ, ದಲಿತ ಸಂಘಟನೆಗಳು ಮತ್ತು ಬುದ್ದಿಜೀವಿಗಳು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಚರಿಸಲುದ್ದೇಶಿಸಿದ್ದ ಮಹಿಷ ದಸರಾ ತೀವ್ರ ವಿವಾದಕ್ಕೆ ಕಾರಣವಾಗಿ ಜಿಲ್ಲಾಡಳಿತ ಚಾಮುಂಡಿ ಬೆಟ್ಟ ಮತ್ತು ಟೌನ್ ಹಾಲ್ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಅಲ್ಲಿ ಕಾರ್ಯಕ್ರಮ ರದ್ದುಮಾಡಿದೆ. 


ಇದರಿಂದಾಗಿ ಮೈಸೂರು ದಸರಾ ಆಯೋಜಕರು ಕಾರ್ಯಕ್ರಮ ಸ್ಥಳವನ್ನು ಅಶೋಕಪುರದ ಅಂಬೇಡ್ಕರ್ ಪಾರ್ಕ್ ಗೆ ವರ್ಗಾಯಿಸಲಾಗಿದ್ದು ಇಲ್ಲಿ ಸಾಹಿತಿಗಳು ಮತ್ತು ಇತರರಿಗೆ ಮಹಿಷಾ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.


ಚಾಮುಂಡಿ ಬೆಟ್ಟದಲ್ಲಿ ಮಹಿಷಾ ದಸರಾ ಆಯೋಜನೆಗೆ ವಿರೋಧ ವ್ಯಕ್ತವಾದಾಗ ಸಂಘಟಕರು ಪ್ರತಿಭಟನೆ ನಡೆಸಿ ಬಿಜೆಪಿ ನೇತೃತ್ವದ ಸರ್ಕಾರ ತನ್ನಿಷ್ಟದಂತೆ ವರ್ತಿಸುತ್ತಿದ್ದು ಜನರ ಭಾವನೆಗಳಿಗೆ ಧಕ್ಕೆಯನ್ನುಂಟುಮಾಡುತ್ತಿದೆ. ಸರ್ಕಾರ ದ್ರಾವಿಡ ಸಂಸ್ಕೃತಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದರು.


ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಸರ್ಕಾರದ ಆದೇಶದಂತೆ ಜಿಲ್ಲಾಡಳಿತ ನಡೆದುಕೊಳ್ಳುತ್ತಿದೆ, ಅದರ ಪ್ರಕಾರ ಚಾಮುಂಡಿ ಬೆಟ್ಟ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸ್ಥಳೀಯರು ಮಹಿಷ ಆಚರಣೆಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Strait of Hormuz: 'ಅಡ್ಡ ಬರುವ Iran ಸಣ್ಣ ಬೋಟ್ ಗಳ ಗುಂಡಿಟ್ಟು ಉಡಾಯಿಸಿ': ಅಮೆರಿಕ ಸೇನೆಗೆ Donald Trump ಆದೇಶ!

ಸ್ವಾತಂತ್ರ್ಯದ ನಂತರ ತಮಿಳುನಾಡು, ಪ.ಬಂಗಾಳದಲ್ಲಿ ದಾಖಲೆ ಪ್ರಮಾಣದ ಮತದಾನ, ಮತದಾರರಿಗೆ ಧನ್ಯವಾದ ಹೇಳಿದ ಚುನಾವಣಾ ಆಯೋಗ!

Hassan: 'ಬಡ್ಡಿ ಸಮೇತ ತೀರಿಸೋವರ್ಗೂ ರಾಜಕೀಯದಲ್ಲಿ ಇರ್ತೀನಿ': ಎಚ್ ಡಿಕೆ ಮುಂದೆಯೇ HD Revanna ಕಣ್ಣೀರಿನ ಶಪಥ

IPL 2026: ಮತ್ತೆ ಮುಗ್ಗರಿಸಿದ MI, 103 ರನ್ ಅಂತರದಲ್ಲಿ CSKಗೆ ಜಯ!

IPL 2026: MI ವಿರುದ್ಧ ಸ್ಫೋಟಕ ಬ್ಯಾಟಿಂಗ್, ಶತಕದ ಮೂಲಕ ಐತಿಹಾಸ ನಿರ್ಮಿಸಿದ Sanju Samson, ಎಲೈಟ್ ಗ್ರೂಪ್ ಸೇರ್ಪಡೆ

SCROLL FOR NEXT