ಶಿಲ್ಪಾ ಶಿವಾನಂದ್ 
ರಾಜ್ಯ

ಚಿಕ್ಕಬಳ್ಳಾಪುರ: ಹೃದಯ ವಿದ್ರಾವಕ, ಸ್ಮೂಲ್ ಆ್ಯಪ್‍ನಲ್ಲಿ ಹಾಡಲಿಲ್ಲ ಅಂತ ಆತ್ಮಹತ್ಯೆಗೆ ಶರಣಾದ ಎರಡು ಮಕ್ಕಳ ತಾಯಿ!

ಸ್ಮೂಲ್ ಆ್ಯಪ್‍ನಲ್ಲಿ ಪರಿಚಿತನಾಗಿದ್ದ ವ್ಯಕ್ತಿಯೋರ್ವ ಇತ್ತೀಚೆಗೆ ತನ್ನ ಜೊತೆಗೆ ಹಾಡುತ್ತಿಲ್ಲ ಎಂದು ಬೇಸರಗೊಂಡು ಗೃಹಿಣಿಯೋರ್ವಳು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಚಿಕ್ಕಬಳ್ಳಾಪುರ: ಸ್ಮೂಲ್ ಆ್ಯಪ್‍ನಲ್ಲಿ ಪರಿಚಿತನಾಗಿದ್ದ ವ್ಯಕ್ತಿಯೋರ್ವ ಇತ್ತೀಚೆಗೆ ತನ್ನ ಜೊತೆಗೆ ಹಾಡುತ್ತಿಲ್ಲ ಎಂದು ಬೇಸರಗೊಂಡು ಗೃಹಿಣಿಯೋರ್ವಳು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಮಾಧ್ಯಮಗಳು ವರದಿ ಮಾಡಿವೆ. 

ಚಿಕ್ಕಬಳ್ಳಾಪುರ ಗರ್ಲ್ಸ್ ಸ್ಕೂಲ್ ರಸ್ತೆಯ ನಿವಾಸಿ 30 ವರ್ಷದ ಶಿಲ್ಪಾ ಎಂಬುವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಸ್ಮೂಲ್ ಆ್ಯಪ್ ನಲ್ಲಿ ಶಿಲ್ಪಾ ಮಾಡಿರುವ ಹಾಡಿನ ವಿಡಿಯೋಗಳು ವೈರಲ್ ಆಗಿವೆ.

ಬಂಗಾರಪೇಟೆ ಮೂಲದ ಶಿವಾನಂದ ಎಂಬುವರ ಜೊತೆ ಶಿಲ್ಪಾ ವಿವಾಹವಾಗಿದ್ದು ಚಿಕ್ಕಬಳ್ಳಾಪುರದಲ್ಲಿ ನೆಲೆಸಿದ್ದರು. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಮಹಾಲಯ ಅಮವಾಸ್ಯೆ ಪ್ರಯುಕ್ತ ಶಿವಾನಂದ ಮಕ್ಕಳೊಂದಿಗೆ ಬಂಗಾರಪೇಟೆಗೆ ಹೋಗಿದ್ದ ವೇಳೆ ಶಿಲ್ಪಾ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಶಿವಾನಂದ ಪತ್ನಿಗೆ ಕರೆ ಮಾಡಿದಾಗ ಆಕೆ ಸ್ವೀಕರಿಸಿದ ಕಾರಣ ಅನುಮಾನಗೊಂಡ ಪತಿ ಮನೆ ಮಾಲೀಕರಿಗೆ ಈ ಬಗ್ಗೆ ತಿಳಿಸಿದ್ದಾರೆ. ಮನೆ ಮಾಲೀಕರು ಬಾಗಿಲು ಒಡೆದು ನೋಡಿದಾಗ ಶಿಲ್ಪಾ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಇನ್ನು ಡೆಟ್ ನೋಟ್ ಬರೆದಿದ್ದು ಅದರಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: 9 ಗಂಟೆಗಳ ಇಂಡಿಯಾ ಕೂಟದ ಧರಣಿಗೆ ಬ್ರೇಕ್!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!

ಪ್ರಿಯಕರನೊಂದಿಗೆ ಸೇರಿ ಪತಿ ಹತ್ಯೆ: ಚಾಟ್​ನಿಂದ ಕೊಲೆ ರಹಸ್ಯ ಬಯಲು; ಹೃದಯಾಘಾತದ ಕಥೆ ಕಟ್ಟಿದ್ದ ಪತ್ನಿ ಬಂಧನ!