ಸಾಂದರ್ಭಿಕ ಚಿತ್ರ 
ರಾಜ್ಯ

ಚೀನಾ ಪ್ಲಾಸ್ಟಿಕ್ ಹೂ ನಿಷೇಧಿಸುವಂತೆ ಆಗ್ರಹಿಸಿ ಹೂ ಬೆಳೆಗಾರರಿಂದ ಲಾಲ್ ಬಾಗ್ ಬಳಿ ಪ್ರತಿಭಟನೆ

ಚೈನಾದಿಂದ ಆಮದಾಗುತ್ತಿರುವ ಪ್ಲಾಸ್ಟಿಕ್ ಹೂಗಳನ್ನು ನಿಷೇಧಿಸಬೇಕು ಹಾಗೂ ಹಾಗೂ ಮಾರಾಟಕ್ಕೆ ಸೂಕ್ತ ಮಾರುಕಟ್ಟೆ ನಿರ್ಮಿಸಬೇಕು ಎಂದು ಆಗ್ರಹಿಸಿ ದಕ್ಷಿಣ ಭಾರತ ಹೂ ಬೆಳೆಗಾರರ ಸಂಘದ ಪ್ರಮುಖರು ನಗರದ ಲಾಲ್ ಬಾಗ್ ಎದುರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಚೈನಾ ಪ್ಲಾಸ್ಟಿಕ್ ಹೂಗಳ ಬಳಕೆ ರಾಜ್ಯದ ಹೂ ಬೆಳೆಗಾರರನ್ನು ಆತಂಕಕ್ಕೀಡು ಮಾಡಿದೆ. ಚೈನಾದಿಂದ ಆಮದಾಗುತ್ತಿರುವ ಪ್ಲಾಸ್ಟಿಕ್ ಹೂಗಳನ್ನು ನಿಷೇಧಿಸಬೇಕು ಹಾಗೂ ಹಾಗೂ ಮಾರಾಟಕ್ಕೆ ಸೂಕ್ತ ಮಾರುಕಟ್ಟೆ ನಿರ್ಮಿಸಬೇಕು ಎಂದು ಆಗ್ರಹಿಸಿ ದಕ್ಷಿಣ ಭಾರತ ಹೂ ಬೆಳೆಗಾರರ ಸಂಘದ ಪ್ರಮುಖರು ನಗರದ ಲಾಲ್ ಬಾಗ್ ಎದುರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ಸುಮಾರು 10 ಲಕ್ಷ ಮೌಲ್ಯದ ಹೂಗಳನ್ನು ಸಾರ್ವಜನಿಕರಿಗೆ ಉಚಿತವಾಗಿ ಹಂಚುವ ಮೂಲಕ ಜನರಲ್ಲಿ  ಪ್ಲಾಸ್ಟಿಕ್ ಹೂಗಳ ಬಳಕೆಯಿಂದ ಪರಿಸರದ ಮೇಲೆ ಆಗುವ ದುಷ್ಪಾರಿಣಾಮಗಳು ಹಾಗೂ ರೈತರಿಗೆ ಆಗುವ ಅನ್ಯಾಯದ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಮಾಡಿದರು.

ದಕ್ಷಿಣ ಭಾರತದ ಹೂ ಬೆಳೆಗಾರರ ಸಂಘದ ನಿರ್ದೇಶಕ ಶ್ರೀಕಾಂತ್ ಮಾತನಾಡಿ, ರಾಜ್ಯದಲ್ಲಿ ಹೂ ಬೆಳೆಗಾರರು ಸುಮಾರು 5850 ಎಕರೆಯಷ್ಟು ಪಾಲಿಹೌಸ್ ಗಳ ಮೂಲಕ ಗುಲಾಬಿ, ಗರ್ಬೆಸ್ಟರಾ, ಕಾರ್ನೇಷನ್, ಸ್ಪ್ರೈ ರೋಸಸ್ ಸೇರಿದಂತೆ 25ಕ್ಕೂ ಹೆಚ್ಚು ಬಗೆಯ ಹೂಗಳನ್ನು ಬೆಳೆಯುತ್ತಿದ್ದಾರೆ. ಇದರಿಂದ ನೇರ ಹಾಗೂ ಪರೋಕ್ಷವಾಗಿ 11 ಲಕ್ಷ ಜನರ ಜೀವನ ಪುಷ್ಪೋದ್ಯಮದ ಮೇಲೆ ಅವಲಂಬಿತವಾಗಿದೆ. ಅಲ್ಲದೆ, ರಾಜ್ಯದಲ್ಲಿ 2. 8 ಲಕ್ಷ ಎಕರೆ ಪ್ರದೇಶದಲ್ಲಿ ಕಾಕಡ, ಮಲ್ಲಿಗೆ, ಚಂಡು, ಸಂಪಿಗೆ, ಕನಕಾಂಬರ ಸೇರಿದಂತೆ 40 ಬಗೆಯ ಹೂಗಳನ್ನು ಬೆಳೆಯಲಾಗುತ್ತದೆ. ಇದರ ಮೇಲೆ ಅವಲಂಬಿತರಾಗಿರುವ ಜನರ ಸಂಖ್ಯೆ 52 ಲಕ್ಷಕ್ಕೂ ಹೆಚ್ಚು ಎಂದರು.

ಕಳೆದ ಕೆಲವು ವರ್ಷಗಳಿಂದ ಚೈನಾದಿಂದ ಆಮದಾಗುತ್ತಿರುವ ಕೃತಕ ಪ್ಲಾಸ್ಟಿಕ್  ಹೂಗಳ ಪ್ರಮಾಣ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, 2019ನೇ ಸಾಲಿನಲ್ಲಿ ಶೇಕಡಾ 92 ರಷ್ಟಕ್ಕೆ ಬಂದು ತಲುಪಿದೆ. 2022ರ ವೇಳೆಗೆ ಹೂ ಮಾರಾಟಗಾರರು ನಾಮವಶೇಷವಾಗಲಿದ್ದಾರೆ. ಹೂ ಬೆಳೆಯುವ ಪ್ರಮುಖ ರಾಜ್ಯಗಳಾದ ಮಹಾರಾಷ್ಟ್ರ, ತಮಿಳುನಾಡು, ಕರ್ನಾಟಕ , ಹಿಮಾಚಲ ಪ್ರದೇಶ ಸೇರಿದಂತೆ ಹಲವಾರು ರಾಜ್ಯಗಳ  ಹೂ ಬೆಳೆಗಾರರ ಆದಾಯಕ್ಕೆ ಕತ್ತರಿ ಬಿದಿದ್ದು, ರೈತರು ಶೇ. 13 ರಿಂದ 14 ರಷ್ಟಿರುವ ಬಡ್ಡಿಯ ಬ್ಯಾಂಕುಗಳ ಸಾಲ ತೀರಿಸಲಾಗದೆ ಸಂಕಷ್ಟಕ್ಕೀಡಾಗಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ತಮಿಳುನಾಡು ಜನತೆಗೆ CM ವಿಜಯ್ ಬಂಪರ್‌ ಗಿಫ್ಟ್;‌ ಸರ್ಕಾರಿ ನೌಕರರಿಗೆ 3ನೇ ಮಗುವಿಗೂ 1 ವರ್ಷ ಮಾತೃತ್ವ ರಜೆ; ಆರೋಗ್ಯ ವಿಮೆ 25 ಲಕ್ಷ ರೂ.ಗೆ ಹೆಚ್ಚಳ!