ಸಂಗ್ರಹ ಚಿತ್ರ 
ರಾಜ್ಯ

ನವರಾತ್ರಿ ಆರಂಭ: ಮೈಸೂರಿನಲ್ಲಿ ಕಳೆಕಟ್ಟಿದ ಸಂಭ್ರಮ

ರಾಜ್ಯದಾದ್ಯಂತ ನವರಾತ್ರಿ ಆಚರಣೆ ಆರಂಭಗೊಂಡಿದ್ದು, ಮೈಸೂರಿನಲ್ಲಿ ದಸರಾ ಸಂಭ್ರಮ ಕಳೆಕಟ್ಟಿದೆ. ಭಾನುವಾರ ಬೆಳಿಗ್ಗೆ 9.39ರಿಂದ 10.25ರೊಳಗೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಸರಸ್ವತಿ ಸಮ್ಮಾನ್ ಪುರಸ್ಕೃತ ಹಿರಿಯ...

ಮೈಸೂರು: ರಾಜ್ಯದಾದ್ಯಂತ ನವರಾತ್ರಿ ಆಚರಣೆ ಆರಂಭಗೊಂಡಿದ್ದು, ಮೈಸೂರಿನಲ್ಲಿ ದಸರಾ ಸಂಭ್ರಮ ಕಳೆಕಟ್ಟಿದೆ. ಭಾನುವಾರ ಬೆಳಿಗ್ಗೆ 9.39ರಿಂದ 10.25ರೊಳಗೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಸರಸ್ವತಿ ಸಮ್ಮಾನ್ ಪುರಸ್ಕೃತ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರು ದೇವಿಗೆ ಪೂಜೆ ಸಲ್ಲಿಸುವ ಮೂಲಕ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ ನೀಡಲಿದ್ದಾರೆ. 

ನಾಡಹಬ್ಬ ಚಾಲನೆ ವೇಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದರು, ಶಾಸಕರು ಹಾಗೂ ಸಚಿವರು ಉಪಸ್ಥಿತರಿರಲಿದ್ದಾರೆ. 

ನವರಾತ್ರಿ ಹಿನ್ನೆಲೆಯಲ್ಲಿ ನಾಡಿನ ಪ್ರಸಿದ್ಧ ದೇವಾಲಯಗಳಾದ ಶೃಂಗೇರಿ, ಕೊಲ್ಲೂರು, ಶಿರಸಿ, ಬನಶಂಕರಿ ಸೇರಿದಂತೆ ಶಕ್ತಿ ದೇವತೆಯ ದೇವಾಲಯಗಳಲ್ಲಿ ದೇವಿಯ ಆರಾಧನೆ, ವಿಶೇಷ ಪೂಜೆ, ಪಾರಾಯಣಗಳು, ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. 

ರಾಜವಂಶಸ್ಥ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅವರು ಅರಮನೆ ಆವರಣದಲ್ಲಿ ಬನ್ನಿ ಪೂಜೆ ನೆರವೇರಿಸಿ, ಬೆಳಿಗ್ಗೆ 9.45ಕ್ಕೆ ರತ್ನ ಖಚಿತ ಸಿಂಹಾಸನವನ್ನೇರಿ ಖಾಸಗಿ ದರ್ಬಾರ್ ನಡೆಸಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ