ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಡಾ.ಎಸ್.ಎಲ್.ಭೈರಪ್ಪ ಚಾಲನೆ 
ರಾಜ್ಯ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಡಾ.ಎಸ್.ಎಲ್.ಭೈರಪ್ಪ ಚಾಲನೆ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಖ್ಯಾತ ಹಿರಿಯ ಸಾಹಿತಿ ಡಾ.ಎಸ್.ಎಲ್ ಭೈರಪ್ಪ ಅವರು ಭಾನುವಾರ ಚಾಲನೆ ನೀಡಿದ್ದಾರೆ. 

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಖ್ಯಾತ ಹಿರಿಯ ಸಾಹಿತಿ ಡಾ.ಎಸ್.ಎಲ್ ಭೈರಪ್ಪ ಅವರು ಭಾನುವಾರ ಚಾಲನೆ ನೀಡಿದ್ದಾರೆ. 

ಇಂದು ಬೇಳಿಗ್ಗೆ 9.39 ರಿಂದ 10.25ಕ್ಕೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರು ಪುಷ್ಪಾರ್ಚನೆ ನೆರವೇರಿಸುವ ಮೂಲಕ ನಾಡಹಬ್ಬ ದಸರಾ ಉತ್ಸವಕ್ಕೆ ಚಾಲನೆ ನೀಡಿದ್ದಾರೆ. 

ದಸರಾ ಉತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜುಗೊಂಡಿದ್ದು, ನವ ವಧುವಿನಂತೆ ಕಂಗೊಳಿಸುತ್ತಿದೆ. 100 ಕಿಮೀ ಗಿಂತಲೂ ಹೆಚ್ಚು ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾದಿಂದ ಕಂಗೊಳಿಸುತ್ತಿದೆ. 

ರಾಜವಂಶಸ್ಥ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅವರು ಅರಮನೆ ಆವರಣದಲ್ಲಿ ಬನ್ನಿ ಪೂಜೆ ನೆರವೇರಿಸಿ, ಬೆಳಿಗ್ಗೆ 9.45ಕ್ಕೆ ರತ್ನ ಖಚಿತ ಸಿಂಹಾಸನವನ್ನೇರಿ ಖಾಸಗಿ ದರ್ಬಾರ್ ನಡೆಸಲಿದ್ದಾರೆ. 

ಇಂದಿನಿಂದ 10 ದಿನಗಳ ಕಾಲ ಅರಮನೆ ಸೇರಿದಂತೆ ಐತಿಹಾಸಿಕ ಕಟ್ಟಡಗಳು, ಸರ್ಕಾರಿ ಕಟ್ಟಡಗಳು ಹಾಗೂ ಮೈಸೂರಿನ ಬಹುಪಾಲು ರಸ್ತೆಗಳು ವಿದ್ಯುತ್ ದೀಪಾಲಂಕಾರದಿಂದ ಜಗಮಗಿಸುತ್ತಿರುತ್ತವೆ. ಜೊತೆಗೆ ಕುಸ್ತಿ, ಆಹಾರ ಮೇಳ, ಫಲಪುಷ್ಪ ಪ್ರದರ್ಶನ, ಸಾಹಸ ಕ್ರೀಡೆಗಳು, ಚಲನಚಿತ್ರೋತ್ಸವ, ವಸ್ತು ಪ್ರದರ್ಶನ, ಪುಸ್ತಕ ಮೇಳ, ದಸರಾ ಸಾಂಸ್ಕೃತಿ ಕಾರ್ಯಕ್ರಮಗಳು ನಡೆಯಲಿವೆ. ಇದು ದಸರಾ ಉತ್ಸವಕ್ಕೆ ಮತ್ತಷ್ಟು ರಂಗು ನೀಡಲಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್