ಎಚ್.ಡಿ.ಕುಮಾರಸ್ವಾಮಿ 
ರಾಜ್ಯ

ಫೋನ್ ಟ್ಯಾಪಿಂಗ್: ಸ್ವಾಮಿಗಳ ಬಗೆಗೆ ಅನುಮಾನ ಪಟ್ಟಿಲ್ಲ, ವರದಿಯಿಂದ ನೋವಾಗಿದೆ- ಕುಮಾರಸ್ವಾಮಿ

ತಮ್ಮ ಅಧಿಕಾರವಧಿಯಲ್ಲಿ ಆದಿ ಚುಂಚನಗಿರಿ ಸ್ವಾಮೀಜಿಯ ಫೋನ್ ಟ್ಯಾಪಿಂಗ್ ನಡೆದಿತ್ತು ಎಂಬ ವರದಿಗಳು, ರಾಜಕೀಯ ನಾಯಕರ ಹೇಳಿಕೆಗಳಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು:  ತಮ್ಮ ಅಧಿಕಾರವಧಿಯಲ್ಲಿ ಆದಿ ಚುಂಚನಗಿರಿ ಸ್ವಾಮೀಜಿಯ ಫೋನ್ ಟ್ಯಾಪಿಂಗ್ ನಡೆದಿತ್ತು ಎಂಬ ವರದಿಗಳು, ರಾಜಕೀಯ ನಾಯಕರ ಹೇಳಿಕೆಗಳಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಆದಿ ಚುಂಚನಗಿರಿ ಸ್ವಾಮೀಜಿಯ ಫೋನ್ ಟ್ಯಾಪಿಂಗ್ ಕುರಿತ ವರದಿಗಳು ಮತ್ತು ಅದಕ್ಕೆ ಸಂಬಂಧಿಸಿದಂತೆ ರಾಜಕೀಯ ನಾಯಕರ ಹೇಳಿಕೆಗಳು ನನ್ನ ಹೃದಯದಲ್ಲಿ ಸಹಿಸಲಾಗದ ನೋವುಂಟು ಮಾಡಿವೆ. ಎಲ್ಲಕ್ಕೂ ಮಿಗಿಲಾಗಿ ಸ್ವಾಮೀಜಿಗಳಲ್ಲಿ ಮೂಡಿರಬಹುದಾದ ಬೇಸರ ನನ್ನ ನೋವನ್ನು ಹೆಚ್ಚಿಸಿದೆ‌ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ನಿರ್ಮಲಾನಂದರು ನನಗೆ ನೈತಿಕ ಬಲವಾಗಿದ್ದರು, ತಮ್ಮ ಸಾಮಾಜಿಕ ಕಾರ್ಯಗಳ ನೆರಳಲ್ಲಿ ನನಗೆ ಮಾರ್ಗದರ್ಶನ ಮಾಡಿದ್ದರು, ನನಗಾಗಿ ಕಾಲಭೈರವನಲ್ಲಿ ಪ್ರಾರ್ಥಿಸಿದ್ದರು. ಅವರ ವಿಚಾರದಲ್ಲಿ ನಾನು ಅನುಮಾನದ ನಡೆ ಅನುಸರಿಸಲು ಸಾಧ್ಯವೇ? ಖಂಡಿತ ಇಲ್ಲ ಎಂದು ಸಮರ್ಥನೆ ನೀಡಿದ್ದಾರೆ.

ಈ ಪ್ರಕರಣದಲ್ಲಿ ಅನಗತ್ಯವಾಗಿ ನನ್ನ ಹೆಸರು ಪ್ರಸ್ತಾಪಿಸಲಾಗಿದೆ. ಸಂಭವಿಸದ ತಪ್ಪೊಂದಕ್ಕೆ ಸಚಿವ ಅಶೋಕ ಅವರು ಎಲ್ಲರಿಗಿಂತಲೂ ಮುಂದೆ ಹೋಗಿ ಕ್ಷಮೆ ಕೇಳಿದ್ದಾರೆ. ಇದರಿಂದ ಅವರಿಗೇನು ಲಾಭವೋ ಗೊತ್ತಿಲ್ಲ. ಅವರ ಆತುರಕ್ಕೆ ಮರುಕವಿದೆ. ಅದೇ ಹೊತ್ತಲ್ಲೇ ಶ್ರೀಗಳಿಗಾಗುತ್ತಿರುವ ಬೇಸರಕ್ಕೆ ಅತೀವ ನೋವಿದೆ ಎಂದು ಟ್ವೀಟ್ ನಲ್ಲಿ ವಿಷಾದ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!