ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಎರಡು ಯುವಕರ ಗುಂಪುಗಳ ಮಾರಾಮಾರಿ

ದಸರಾ ಆಚರಣೆ ಉದ್ಘಾಟನೆಗೊಂಡ ಮೊದಲ ದಿನವೇ ಯುವಕರ ಎರಡು ಗುಂಪುಗಳು ಪರಸ್ಪರ ಹೊಡೆದಾಡಿಕೊಂಡು ದಸರಾ ಆಚರಣೆಗೆ ಒಂದು ಕಪ್ಪು ಚುಕ್ಕೆ ಇಟ್ಟಿದ್ದಾರೆ. 

ಮೈಸೂರು: ದಸರಾ ಆಚರಣೆ ಉದ್ಘಾಟನೆಗೊಂಡ ಮೊದಲ ದಿನವೇ ಯುವಕರ ಎರಡು ಗುಂಪುಗಳು ಪರಸ್ಪರ ಹೊಡೆದಾಡಿಕೊಂಡು ದಸರಾ ಆಚರಣೆಗೆ ಒಂದು ಕಪ್ಪು ಚುಕ್ಕೆ ಇಟ್ಟಿದ್ದಾರೆ. 

ಪಾನಮತ್ತರಾಗಿದ್ದ 10 ಯುವಕರ ತಂಡ ಇಬ್ಬರು ಯುವಕರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಲ್ಲದೆ, ಎರಡು ಬೈಕ್​ಗಳನ್ನು ಸಂಪೂರ್ಣ ಧ್ವಂಸಗೊಳಿಸಿದ್ದಾರೆ. ಭಾನುವಾರ ರಾತ್ರಿ 9 ಗಂಟೆಯಲ್ಲಿ ಈ ಹೊಡೆದಾಟ ನಡೆದಿದ್ದು, ಅಧಿಕ ಸಂಖ್ಯೆಯಲ್ಲಿ ಸೇರಿದ್ದ ಜನರು ಮೂಕಪ್ರೇಕ್ಷಕರಾಗಿ ನಿಂತಿದ್ದರು ಎನ್ನಲಾಗಿದೆ.

ನಡುರಸ್ತೆಯಲ್ಲಿ ಇಬ್ಬರು ಯುವಕರ ಮೇಲೆ ಹಲ್ಲೆ ಮಾಡುವ 10 ಯುವಕರ ತಂಡ ಮನಸೋಇಚ್ಛೆ ಥಳಿಸಿದೆ. ಅಂದಾಜು ಅರ್ಧ ಗಂಟೆಗೂ ಹೆಚ್ಚುಕಾಲ ಹಲ್ಲೆ ನಡೆಸಲಾಗಿದೆ. ಗಲಾಟೆಗೆ ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ.

ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಹಲ್ಲೆ ಮಾಡುತ್ತಿದ್ದ ತಂಡದ ಕೆಲ ಯುವಕರನ್ನು ವಶಕ್ಕೆ ಪಡೆದುಕೊಂಡರು. ಬಳಿಕ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಯುವಕರನ್ನು ಆಸ್ಪತ್ರೆಗೆ ಸ್ಥಳಾಂತರಿಸಿದರು. ಕೆ.ಆರ್​.ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

Indian Stock Market ಮತ್ತೆ ಭಾರಿ ಕುಸಿತ; ಸೆನ್ಸೆಕ್ಸ್ 1,045 ಅಂಕ ಕುಸಿತ, 10 ಲಕ್ಷ ಕೋಟಿ ರೂ ನಷ್ಟ!