ಸಾಂದರ್ಭಿಕ ಚಿತ್ರ 
ರಾಜ್ಯ

ದಾವಣಗೆರೆ: ಮೊಬೈಲ್ ಕಳೆದಿದ್ದಕ್ಕೆ ರೈಲಿಗೆ ತಲೆ ಕೊಟ್ಟ ಯುವಕ

ಮೊಬೈಲ್ ಕಳೆದಿದ್ದಕ್ಕೆ ಮನೆಯವರು ಬೈಯುತ್ತಾರೆ ಎಂದು ಹೆದರಿ ಯುವಕನೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ  ಘಟನೆ ನಗರದ  ಡಿಸಿಎಂ ಟೌನ್ ಶಿಪ್ ಬಳಿ ನಡೆದಿದೆ. 

ದಾವಣಗೆರೆ: ಮೊಬೈಲ್ ಕಳೆದಿದ್ದಕ್ಕೆ ಮನೆಯವರು ಬೈಯುತ್ತಾರೆ ಎಂದು ಹೆದರಿ ಯುವಕನೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ  ಘಟನೆ ನಗರದ  ಡಿಸಿಎಂ ಟೌನ್ ಶಿಪ್ ಬಳಿ ನಡೆದಿದೆ.


ದಾವಣಗೆರೆಯ ನಿಟ್ಟುವಳ್ಳಿಯ ನಿವಾಸಿ 22 ವರ್ಷದ ಸಿದ್ದೇಶ್, ಭಾನುವಾರ ರಾತ್ರಿ ಪಕ್ಕದ ಮನೆಯವರ ಮೊಬೈಲ್ ಪಡೆದುಕೊಂಡಿದ್ದನು. ಆದರೆ , ರಾತ್ರಿಯೇ ಆ ಮೊಬೈಲ್ ಕಳೆದು ಹೋಗಿದೆ. ಈ ವಿಚಾರ ಪಕ್ಕದ ಮನೆಯವರಿಗೆ ತಿಳಿಯುತ್ತಿದಂತೆ ಮೊಬೈಲ್ ವಾಪಸ್ ತಂದುಕೊಡುವಂತೆ ಬೈದಿದ್ದಲ್ಲದೇ, ಆತನ ಮನೆಯವರಿಗೆ ವಿಷಯ ತಿಳಿಸುವುದಾಗಿ ಬೆದರಿಸಿದ್ದರು. 


 ಮೊಬೈಲ್ ಕಳೆದುಕೊಂಡಿರುವ ವಿಚಾರ ಮನೆಯವರಿಗೆ ಗೊತ್ತಾದರೆ ಬೈಯುತ್ತಾರೆ ಎಂದು ಹೆದರಿ ಆತ ಇಂದು ಬೆಳಗ್ಗೆ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.


 ಘಟನಾ ಸ್ಥಳಕ್ಕೆ ಕೆಟಿಜೆ ನಗರ ಹಾಗೂ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು,  ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!