ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕೊರೋನಾ ವೈರಸ್: ರಾಜ್ಯದಲ್ಲಿ ಇನ್ನೂ 4 ಹೊಸ ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 105ಕ್ಕೆ ಏರಿಕೆ

ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆರ್ಭಟ ಮುಂದುವರೆದಿದ್ದು, ಬುಧವಾರ 4 ಹೊಸ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 105ಕ್ಕೇರಿಕೆಯಾಗಿದೆ.

ಸಂಗ್ರಹ ಚಿತ್ರ
Manjula VN
Updated On : 1 Apr 2020, 2:49 pm

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆರ್ಭಟ ಮುಂದುವರೆದಿದ್ದು, ಬುಧವಾರ 4 ಹೊಸ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 105ಕ್ಕೇರಿಕೆಯಾಗಿದೆ. 

ಬೆಂಗಳೂರಿನ 24 ವರ್ಷದ ಯುವಕನಲ್ಲಿ ಸೋಂಕು ದೃಢಪಟ್ಟಿದೆ. ಈತನ ಹೆಚ್ಚಿನ ವಿವರಗಳು ಇನ್ನೂ ಪತ್ತೆಯಾಗಿಲ್ಲ. ಜೊತೆಗೆ, 52 ನೇ ಸೋಂಕಿತನೊಂದಿಗೆ ಸಂಪರ್ಕ ಹೊಂದಿದ್ದ ನಂಜನಗೂಡಿನ 37 ಹಾಗೂ 27 ವರ್ಷದ ವ್ಯಕ್ತಿಗಳಲ್ಲಿ ಸೋಂಕು ದೃಢಪಟ್ಟಿದೆ. ಇವರು ನಂಜನಗೂಡಿನ ಔಷಧ ತಯಾರಿಕಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರಿಬ್ಬರಲ್ಲಿ ಓರ್ವ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ 33 ವರ್ಷದ ಬೆಂಗಳೂರು ಜಿಲ್ಲೆಯ ನಿವಾಸಿಗೆ ಕೂಡ ಸೋಂಕು ತಗುಲಿದೆ.

ಇವರೆಲ್ಲರನ್ನೂ ಪ್ರತ್ಯೇಕ ಆಸ್ಪತ್ರೆಗಳಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ. ಇಲ್ಲಿಯವರೆಗೆ ರಾಜ್ಯದಲ್ಲಿ ಸೋಂಕಿನಿಂದ ಮೂವರು ಮೃತಪಟ್ಟಿದ್ದು, 9 ಜನರು ಚೇತರಿಸಿಕೊಂಡಿದ್ದಾರೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement