ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮದ್ಯ ಸಿಗದೆ ವಿವಾಹಿತ ಆತ್ಮಹತ್ಯೆಗೆ ಶರಣು

ಲಾಕ್‌ಡೌನ್ ನಿಂದಾಗಿ ಕುಡಿಯಲು ಮದ್ಯ ಸಿಗದೆ ನೊಂದ ವಿವಾಹಿತ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಲಾಕ್‌ಡೌನ್ ನಿಂದಾಗಿ ಕುಡಿಯಲು ಮದ್ಯ ಸಿಗದೆ ನೊಂದ ವಿವಾಹಿತ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಮಾಗಡಿಯ ಹುಲಿಕೆರೆಯ ರಮೇಶ್(35) ಎಂದು ಗುರುತಿಸಲಾಗಿದೆ.

ಕಳೆದ ಕೆಲವು ದಿನಗಳಿಂದ ಜಾರಿಯಲ್ಲಿರುವ ಲಾಕ್‌ಡೌನ್‌ನಿಂದ ಮದ್ಯದಂಗಡಿಗಳಿಗೆ ಬೀಗ ಜಡಿಯಲಾಗಿದೆ. ಕಳೆದು ಮೂರು ದಿನಗಳಿಂದ ಮದ್ಯಕ್ಕಾಗಿ ಹುಡುಕಾಟ ನಡೆಸಿದ್ದ ರಮೇಶ್, ಬೇಸತ್ತಿದ್ದು ಈ ಹಿನ್ನೆಲೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿ ಗ್ರಾಮದ ಹೊರವಲಯದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದೆ.

ಕುಡಿತದ ಚಟ ಅಂಟಿಸಿಕೊಂಡಿದ್ದ ರಮೇಶ್‌ಗೆ ವಿವಾಹವಾಗಿದ್ದು, ಪತ್ನಿ ಮತ್ತು ಮಕ್ಕಳು ಆತನನ್ನು ತೊರೆದಿದ್ದರು. ಇದರಿಂದ ಕುಡಿತವನ್ನು ಮತ್ತಷ್ಟು ಹೆಚ್ಚಿಸಿಕೊಂಡಿದ್ದನು. ಮಾಹಿತಿ ಪಡೆದು ಸ್ಥಳಕ್ಕೆ ಭೇಟಿ ನೀಡಿದ ಕುದೂರು ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!