ರಾಜ್ಯ

ನಿಜಾಮುದ್ದೀನ್ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದ ಕರ್ನಾಟಕದ ಜನರ ಮಾಹಿತಿ ಸಿಕ್ಕಿದೆ:ಸಚಿವ ಶ್ರೀರಾಮುಲು

Sumana Upadhyaya

ಬೆಂಗಳೂರು: ದೆಹಲಿಯ ಬಾಂಗ್ಲಾವಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಪ್ರಾರ್ಥನೆಯಲ್ಲಿ ಭಾಗವಹಿಸಿದ ಕರ್ನಾಟಕ ಮೂಲದ 300 ಜನರು ಭಾಗವಹಿಸಿದ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯ ನಿಜಾಮುದ್ದೀನ್ ನಲ್ಲಿ ನಡೆದ ಮರ್ಕಜ್ ನಲ್ಲಿ ಭಾಗವಿಸಿದ್ದ ವಿವಿಧ ರಾಜ್ಯಗಳ ಅನೇಕರಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅಲ್ಲಿ ಹಾಜರಿದ್ದ ರಾಜ್ಯದ ಜನತೆ ಸ್ವಯಂ ಪ್ರೇರಿತರಾಗಿ ಆಗಮಿಸಿ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳುವಂತ ರಾಜ್ಯ ಸರ್ಕಾರ ಮನವಿ ಮಾಡಿಕೊಂಡಿತ್ತು.

ಇದೀಗ ಸ್ವತಃ ಆರೋಗ್ಯ ಸಚಿವರೇ ಇಂದು ಟ್ವೀಟ್ ಮಾಡಿದ್ದು, ಕರ್ನಾಟಕದ 300 ಜನರು ಭಾಗವಹಿಸಿದ್ದವರ ಬಗ್ಗೆ ಮಾಹಿತಿ ಸಿಕ್ಕಿದೆ. ಇವರಲ್ಲಿ 40 ಜನರನ್ನು ಪರೀಕ್ಷೆಗೊಳಪಡಿಸಲಾಗಿದ್ದು ಎಲ್ಲರನ್ನೂ ಪ್ರತ್ಯೇಕವಾಗಿ ಕ್ವಾರಂಟೈನ್ ನಲ್ಲಿ ಇಡಲಾಗುತ್ತಿದೆ. 40 ಮಂದಿಯಲ್ಲಿ 12 ಜನರ ಕೊರೋನಾ ಪರೀಕ್ಷೆಯಲ್ಲಿ ನೆಗೆಟಿವ್ ಎಂದು ಬಂದಿದೆ ಎಂದರು.

ಇನ್ನು ಅಂದು ಪ್ರಾರ್ಥನೆಯಲ್ಲಿ ಭಾಗವಹಿಸಿದ್ದ ಇಂಡೋನೇಷ್ಯಾ ಮತ್ತು ಮಲೇಷಿಯಾದ 62 ಪ್ರಜೆಗಳು ಕರ್ನಾಟಕಕ್ಕೆ ಬಂದಿದ್ದಾರೆ ಎಂಬ ಮಾಹಿತಿ ಕೂಡ ಸರ್ಕಾರಕ್ಕೆ ಸಿಕ್ಕಿದೆ. ತಮ್ಮ ದೇಶಕ್ಕೆ ವಾಪಸ್ಸಾಗದ ಈ ದೇಶಗಳ ಪ್ರಜೆಗಳನ್ನು ಪತ್ತೆಹಚ್ಚಿ ಕ್ವಾರಂಟೈನ್ ನಲ್ಲಿಡುವ ಕೆಲಸವನ್ನು ಗೃಹ ಇಲಾಖೆ ಮತ್ತು ಆರೋಗ್ಯ ಇಲಾಖೆ ಮಾಡುತ್ತಿದೆ.

SCROLL FOR NEXT