ಸಂಗ್ರಹ ಚಿತ್ರ 
ರಾಜ್ಯ

ನಿಜಾಮುದ್ದೀನ್ ಮಸೀದಿಯಲ್ಲಿ ಕೊರೋನಾ ಸ್ಫೋಟ: ಧಾರ್ಮಿಕ ಕಾರ್ಯಕ್ರಮದಲ್ಲಿ 1,500 ಮಂದಿ ಭಾಗಿ, ರಾಜ್ಯಗಳಿಗೆ ಪಟ್ಟಿ ರವಾನಿಸಿದ ಕೇಂದ್ರ, ಎಲ್ಲೆಡೆ ಪರಿಶೀಲನೆ

ದೆಹಲಿಯ ತಬ್ಲೀಘಿ ಜಮಾತ್'ಗೆ ಸಂಬಂಧಿಸಿದಂತೆ 1,500 ಜನರ ಪಟ್ಟಿಯನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ಕಳುಹಿಸಿಕೊಟ್ಟಿದೆ. ಈ ಪೈಕಿ 800 ಮಂದಿಯನ್ನು ಪತ್ತೆ ಹಚ್ಚಿ ಈಗಾಗಲೇ ತಪಾಸಣೆಗೆ ಗುರಿಪಡಿಸಿದ್ದು, ರೋಗ ಲಕ್ಷಣ ಕಾಣಿಸಿಕೊಂಡ 143 ಮಂದಿಯ ಮಾದರಿಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ ಎಂದು ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಹೇಳಿದ್ದಾರೆ. 

ಬೆಂಗಳೂರು: ದೆಹಲಿಯ ತಬ್ಲೀಘಿ ಜಮಾತ್'ಗೆ ಸಂಬಂಧಿಸಿದಂತೆ 1,500 ಜನರ ಪಟ್ಟಿಯನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ಕಳುಹಿಸಿಕೊಟ್ಟಿದೆ. ಈ ಪೈಕಿ 800 ಮಂದಿಯನ್ನು ಪತ್ತೆ ಹಚ್ಚಿ ಈಗಾಗಲೇ ತಪಾಸಣೆಗೆ ಗುರಿಪಡಿಸಿದ್ದು, ರೋಗ ಲಕ್ಷಣ ಕಾಣಿಸಿಕೊಂಡ 143 ಮಂದಿಯ ಮಾದರಿಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ ಎಂದು ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಹೇಳಿದ್ದಾರೆ. 

ಈ ಪೈಕಿ 1,500 ಮಂದಿಯೂ ತಬ್ಲೀಘಿ ಜಮಾತ್ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿಗಳಿಲ್ಲ. ಆದರೆ, ನಿಜಾಮುದ್ದೀನ್'ಗೆ ಸಂಬಂಧಿಸಿದ ಪ್ರಕರಣಗಳ ವಿವರಗಳಾಗಿ ಕೇಂದ್ರ ಸರ್ಕಾರ ಪಟ್ಟಿಯನ್ನುಕಳುಹಿಸಿಕೊಟ್ಟಿದ್ದು, ಈ ಬಗ್ಗೆ ತನಿಖೆಯನ್ನು ಮುಂದುವರೆಸಿದ್ದೇವೆಂದು ತಿಳಿಸಿದ್ದಾರೆ. 

ಕೇಂದ್ರದಿಂದ ರಾಜ್ಯ ಸರ್ಕಾರಕ್ಕೆ ಮೂರು ಪಟ್ಟಿ ಬಂದಿವೆ. ಮಾ.8ರಿಂದ 20ರವರೆಗಿನ ಅವಧಿಯಲ್ಲಿ ರಾಜ್ಯದಿಂದ 1,500 ಮಂದಿ ನಿಜಾಮುದ್ದೀನ್'ಗೆ ಆಗಮಿಸಿರಬಹುದು ಎನ್ನಲಾದ 1,500 ಮಂದಿ ಪಟ್ಟಿ ಇದಾಗಿದ್ದು, ಈ ಪೈಕಿ 800ಮಂದಿಯನ್ನು ಈಗಾಗಲೇ ಪತ್ತೆಹಚ್ಚಿದ್ದೇವೆ. ಉಳಿದ 700 ಮಂದಿಯನ್ನು ಗುರುವಾರ ರಾತ್ರಿಯೊಳಗೆ ಪತ್ತೆ ಹಚ್ಚಿ ತಪಾಸಣೆಗೆ ಒಳಪಡಿಸಲಿದ್ದೇವೆ. ಇನ್ನು ತಪಾಸಣೆಗೆ ಒಳಪಡಿಸಿರುವ 800 ಮಂದಿಯಲ್ಲಿ 143 ಮಂದಿಗೆ ರೋಗದ ಲಕ್ಷಣಗಳು ಕಾಣಿಸಿಕೊಂಡಿರುವುದರಿಂದ ಗಂಟಲು ದ್ರವದ ಸ್ವ್ಯಾಬ್ ಅನ್ನು ಪರೀಕ್ಷೆಗೆ ರವಾನಿಸಲಾಗಿದೆ. ಅಲ್ಲದೆ ಇಷ್ಟೂಮಂದಿಯನ್ನು ಸರ್ಕಾರಿ ನಿಯಂತ್ರಣದಲ್ಲಿರುವ ಮಾಸ್ ಕ್ವಾರಂಟೈನ್'ಗೆ ಸ್ಥಳಾಂತರ ಮಾಡಲಾಗಿದೆ ಎಂದು ಎಂದಿದ್ದಾರೆ. 

ಇದೇ ವೇಳೆ ಮಸೀದಿಗೆ ಭೇಟಿ ನೀಡಿದ್ದವರು ಸ್ವಯಂಪ್ರೇರಿತವಾಗಿ ಆರೋಗ್ಯ ಇಲಾಖೆಗೆ ವರದಿ ಮಾಡಿಕೊಳ್ಳುವಂತೆ ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗಿತ್ತು. ಅಲ್ಲದೆ, ಅವರಿಗಾಗಿಯೇ ಸಹಾಯವಾಣಿ ಸಂಖ್ಯೆಯನ್ನು ನೀಡಲಾಗಿತ್ತು. ಹಲವರು 080-2911171 ಸಹಾಯವಾಣಿ ಮೂಲಕ ಸ್ವಯಂಪ್ರೇರಿತವಾಗಿ ಆಗಮಿಸಿ ಪ್ರಾಥಮಿಕ ತಪಾಸಣಾ ಕೇಂದ್ರಗಳಲ್ಲಿ ತಪಾಸಣೆಗೆ ಒಳಗಾಗುತ್ತಿದ್ದಾರೆಂದು ವಿವರಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT