ಸಾಂದರ್ಬಿಕ ಚಿತ್ರ 
ರಾಜ್ಯ

ಲಾಕ್ ಡೌನ್ ನಡುವೆಯೂ ಲಂಚ ಪಡೆದ ಸಾರಿಗೆ ಅಧಿಕಾರಿಗಳ ಅಮಾನತು; ರೂ.12,350 ನಗದು ವಶ

ಬೆಂಗಳೂರು ನಗರ ಜಿಲ್ಲೆಯ ಅತ್ತಿಬೆಲೆ ಚೆಕ್ ಪೋಸ್ಟ್ ಅಲ್ಲಿ ನಿನ್ನೆ ರಾತ್ರಿ ಹಣ್ಣು ಮತ್ತು ತರಕಾರಿ ಸಾಗಣೆ ಮಾಡುತ್ತಿದ್ದ ವಾಹನ ಚಾಲಕರಿಂದ ಲಂಚ ಪಡೆದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ ಇಬ್ಬರು ಬ್ರೇಕ್ ಇನ್ಸ್ ಪೆಕ್ಟರ್ ಗಳನ್ನು ಜಿಲ್ಲಾಧಿಕಾರಿಗಳಾದ ಜಿ ಎನ್ ಶಿವಮೂರ್ತಿ ಅಮಾನತು ಮಾಡಿದ್ದಾರೆ. 

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಅತ್ತಿಬೆಲೆ ಚೆಕ್ ಪೋಸ್ಟ್ ಅಲ್ಲಿ ನಿನ್ನೆ ರಾತ್ರಿ ಹಣ್ಣು ಮತ್ತು ತರಕಾರಿ ಸಾಗಣೆ ಮಾಡುತ್ತಿದ್ದ ವಾಹನ ಚಾಲಕರಿಂದ ಲಂಚ ಪಡೆದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ ಇಬ್ಬರು ಬ್ರೇಕ್ ಇನ್ಸ್ ಪೆಕ್ಟರ್ ಗಳನ್ನು ಜಿಲ್ಲಾಧಿಕಾರಿಗಳಾದ ಜಿ ಎನ್ ಶಿವಮೂರ್ತಿ ಅಮಾನತು ಮಾಡಿದ್ದಾರೆ. 

ಬ್ರೇಕ್ ಇನ್ಸ್ ಪೆಕ್ಟರ್ ಗಳಾದ ಟಿ. ಕೆ ಜಯಣ್ಣ ಹಾಗೂ ಕರಿಯಪ್ಪ ಅಮಾನತುಗೊಂಡ ಸಾರಿಗೆ ಅಧಿಕಾರಿಗಳು ಸೇರಿದಂತೆ ಇವರೊಂದಿಗೆ ಶಾಮೀಲಾಗಿದ್ದ ಮಾಜಿ ಹೋಮ್ ಗಾರ್ಡ್ ವಿವೇಕ್ ಅವರನ್ನು ಚಾಲಕರಿಂದ ಲಂಚ ಪಡೆದ ಹಿನ್ನೆಲೆ ಅಪರ ಪೊಲೀಸ್ ಅಧೀಕ್ಷಕರಾದ ಸಜಿತ್ ಅವರಿಂದ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. 

ಕರಿಯಪ್ಪ ಅವರಿಂದ ರೂ. 1250, ಜಯಣ್ಣ ಅವರಿಂದ ರೂ 1100 ಹಾಗೂ ವಿವೇಕ್ ಅವರಿಂದ ರೂ 800 ಹಾಗೂ ಚೆಕ್ ಪೋಸ್ಟ್ ಕಚೇರಿಯಲ್ಲಿ ರೂ.12,350 ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್