ರಾಜ್ಯ

ಬಿಎಸ್ 4 ವಾಹನ ನೋಂದಣಿ ಏ.30ರವರೆಗೆ ವಿಸ್ತರಣೆ

ಬಿಎಸ್4 ವಾಹನ ಖರೀದಿಸಿದವರು ಏಪ್ರಿಲ್ 30ರವರೆಗೆ ನೋಂದಣಿ ಮಾಡಿಕೊಳ್ಳಬಹುದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಬೆಳಗಾವಿ: ಬಿಎಸ್4 ವಾಹನ ಖರೀದಿಸಿದವರು ಏಪ್ರಿಲ್ 30ರವರೆಗೆ ನೋಂದಣಿ ಮಾಡಿಕೊಳ್ಳಬಹುದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ನಿನ್ನೆ ಮಾತನಾಡಿದ ಅವರು,  ಸುಪ್ರೀಂ ಕೋರ್ಟ್ ಆದೇಶದಂತೆ ಈ ಮೊದಲು 31ರೊಳಗೆ ಬಿಎಸ್4 ವಾಹನ ನೋಂದಣಿ ಮಾಡಿಕೊಳ್ಳಬೇಕಿತ್ತು. ಕೊರೋನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ದೇಶವೇ ಲಾಕ್ ಡೌನ್ ಆಗಿದೆ. ಈ ಕಾರಣಕ್ಕೆ ನೋಂದಣಿ ಸಮಯ ಏಪ್ರಿಲ್ 30ರವರೆಗೆ ವಿಸ್ತರಿಸುವಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿತ್ತು. ಕೇಂದ್ರದ ಮನವಿಗೆ ಸುಪ್ರೀಂಕೋರ್ಟ್ ಸಹಮತ ವ್ಯಕ್ತಪಡಿಸಿದೆ. ಹೀಗಾಗಿ ಬಿಎಸ್4 ವಾಹನ ಖರೀದಿಸಿದ ಗ್ರಾಹಕರು ಆತಂಕಕ್ಕೆ ಒಳಗಾಗಬಾರದು ಎಂದು ಭರವಸೆ ನೀಡಿದರು.

ವಾಹನ ಖರೀದಿಸುವ ಗ್ರಾಹಕರು ಸಾರಿಗೆ ಇಲಾಖೆಗೆ ಇಮೇಲ್ ಮೂಲಕ ಮಾಹಿತಿ ನೀಡಬೇಕು ಎಂದರು. ಸುಪ್ರೀಂ ಕೋರ್ಟ್ ಆದೇಶ ಪ್ರಕಾರ ಈ ಮೊದಲು ಮಾರ್ಚ್ 31ರೊಳಗೆ ಬಿಎಸ್4 ವಾಹನ ನೋಂದಣಿ ಮಾಡಿಕೊಳ್ಳಬೇಕಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ನಾಯಕತ್ವ ಬದಲಾವಣೆಯ ನಡುವೆ CM ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತೆ ದೆಹಲಿಗೆ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

ಕ್ರೇಜಿಸ್ಟಾರ್ ರವಿಚಂದ್ರನ್ ವಿರುದ್ಧವೇ ಅತ್ಯಾಚಾರ ಯತ್ನ ಆರೋಪ, ಮಾನನಷ್ಟ ಮೊಕದ್ದಮೆ: ಕಣ್ಣೀರಿಟ್ಟು ಕ್ಷಮೆ ಕೇಳಿದ 'ಹಳ್ಳಿಮೇಷ್ಟ್ರು' ನಟಿ Bindiya!

Karnataka CM News LIVE Updates | ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ; ಸಿಎಲ್‌ಪಿ ಸಭೆ ಶನಿವಾರ ಸಾಧ್ಯತೆ!

ವೀರೇಂದ್ರ ಪಾಟೀಲರಿಗೆ ಅಪ್ಪ, ಸಿದ್ದರಾಮಯ್ಯರಿಗೆ ಮಗ ಅಪಮಾನ: ರಾಹುಲ್ ವಿರುದ್ಧ ಪ್ರಲ್ಹಾದ ಜೋಶಿ ಕಿಡಿ!

SCROLL FOR NEXT