ಡಾ.ಅಶ್ವತ್ಥನಾರಾಯಣ 
ರಾಜ್ಯ

ಪತ್ರಕರ್ತರಿಗೂ ವಿಮಾ ಸೌಲಭ್ಯ: ಕೇಂದ್ರಕ್ಕೆ ಶಿಫಾರಸ್ಸು ಮಾಡುವೆನೆಂದ ಡಿಸಿಎಂ ಡಾ.ಅಶ್ವತ್ಥನಾರಾಯಣ

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಅಧ್ಯಕ್ಷ ಶಿವಾನಂದ ತಗಡೂರು ಅವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಜಿಲ್ಲಾ, ಪ್ರಾದೇಶಿಕ ಪತ್ರಿಕೆಗಳಿಗೂ ಕೂಡಲೇ ಜಾಹೀರಾತು ಬಿಡುಗಡೆ ಮಾಡುವಂತೆ ವಾರ್ತಾ ಇಲಾಖೆಗೆ ಸೂಚಿಸಿದ್ದಾರೆ. 

ಬೆಂಗಳುರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಅಧ್ಯಕ್ಷ ಶಿವಾನಂದ ತಗಡೂರು ಅವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಜಿಲ್ಲಾ, ಪ್ರಾದೇಶಿಕ ಪತ್ರಿಕೆಗಳಿಗೂ ಕೂಡಲೇ ಜಾಹೀರಾತು ಬಿಡುಗಡೆ ಮಾಡುವಂತೆ ವಾರ್ತಾ ಇಲಾಖೆಗೆ ಸೂಚಿಸಿದ್ದಾರೆ.

ವಾರ್ತಾ ಭವನದ ಮಹಾತ್ಮಾ ಗಾಂಧಿ ಮಾಧ್ಯಮ ಕೇಂದ್ರದಲ್ಲಿ ನೂತನವಾಗಿ ರೂಪಿಸಲಾಗಿರುವ 'ದಾಸೋಹ' ಕಂಟ್ರೋಲ್ ರೂಂಗೆ ಚಾಲನೆ ನೀಡಲಾಯಿತು. 

ಕೆಯುಡಬ್ಲ್ಯೂಜೆ ಮನವಿ ಬಗ್ಗೆ ವಾರ್ತಾ ಇಲಾಖೆಯ ಅಧಿಕಾರಿಗಳಿಗೆ ಗಮನ ಸೆಳೆದ ಡಿಸಿಎಂ ಡಾ.ಅಶ್ವಥ್ ನಾರಾಯಣ್ , ಪತ್ರಿಕೆಗಳನ್ನು ನಡೆಸುವುದು ಕಷ್ಟವಿದೆ. ಈ ಕಷ್ಟದ ಹೊತ್ತಿನಲ್ಲಿ ಕರೊನಾ ಜಾಗೃತಿ ಸೇರಿದಂತೆ ಸರ್ಕಾರದ ಜಾಹೀರಾತು ಕೊಡುವಂತೆ ಆದೇಶಿಸಿದರು.

ಸ್ಥಳದಲ್ಲಿಯೇ ಇದ್ದ ವಾರ್ತಾ ಇಲಾಖೆಯ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್ ಅವರು ವಾರ್ತಾ ಇಲಾಖೆಯ ಆಯುಕ್ತ ಸಿದ್ದರಾಮಪ್ಪ ಅವರಿಗೆ ಜಾಹೀರಾತು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ

ಪತ್ರಕರ್ತರನ್ನು ಕೇಂದ್ರ ಸರ್ಕಾರದ ವಿಮಾ ಯೋಜನೆ ವ್ಯಾಪ್ತಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಸಂಘ ಸಲ್ಲಿಸಿದ ಮನವಿಯನ್ನು ಪರಿಗಣಿಸಿ ದ ಉಪಮುಖ್ಯಮಂತ್ರಿ ಡಾ‌ಅಶ್ವಥ್ ನಾರಾಯಣ ಅವರು ರಾಜ್ಯ ಸರ್ಕಾರದಿಂದಲೂ ಈ ಬಗ್ಗೆ ಶಿಫಾರಸ್ಸು ಮಾಡುವ ಭರವಸೆಯನ್ನು ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು