ಸಂಗ್ರಹ ಚಿತ್ರ 
ರಾಜ್ಯ

ಇಂದಿರಾ ಕ್ಯಾಂಟಿನ್ ನಲ್ಲಿ ಉಚಿತ ಊಟವಿಲ್ಲ: ಅಚ್ಚರಿ ಮೂಡಿಸಿದ ಸಿಎಂ ನಿರ್ಧಾರ

ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಊಟ ನೀಡುವುದನ್ನು ನಿಲ್ಲಿಸಲು ಸರ್ಕಾರ ನಿರ್ಧರಿಸಿದೆ.ಆರ್ಥಿಕ ಹೊರೆ ಹೆಚ್ಚುತ್ತಿರುವ ಹಿನ್ನೆಲೆಯೊಳಗೆ ಉಚಿತ ಊಟದ ಬದಲು ಹಿಂದೆ ಜಾರಿಯಲ್ಲಿದ್ದ ರಿಯಾಯಿತಿ ದರದಲ್ಲಿ ಊಟ–ಉಪಾಹಾರ ನೀಡಲು ಸರ್ಕಾರ ತೀರ್ಮಾನಿಸಿದೆ.

ಬೆಂಗಳೂರು: ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಊಟ ನೀಡುವುದನ್ನು ನಿಲ್ಲಿಸಲು ಸರ್ಕಾರ ನಿರ್ಧರಿಸಿದೆ.ಆರ್ಥಿಕ ಹೊರೆ ಹೆಚ್ಚುತ್ತಿರುವ ಹಿನ್ನೆಲೆಯೊಳಗೆ ಉಚಿತ ಊಟದ ಬದಲು ಹಿಂದೆ ಜಾರಿಯಲ್ಲಿದ್ದ ರಿಯಾಯಿತಿ ದರದಲ್ಲಿ ಊಟ–ಉಪಾಹಾರ ನೀಡಲು ಸರ್ಕಾರ ತೀರ್ಮಾನಿಸಿದೆ.

ಕೊರೊನಾ ಸೋಂಕು ಹರಡಲು ಆರಂಭಿಸಿದ ಮೇಲೆ ಹೋಟೆಲ್‌ಗಳನ್ನು ಬಂದ್ ಮಾಡಲಾಗಿತ್ತು. ಈ ಹೊತ್ತಿನಲ್ಲಿ ಬಡವರು ಊಟಕ್ಕೆ ಪರದಾಡುವುದನ್ನು ತಪ್ಪಿಸಲು ಕೆಲವು ಕಡೆಗಳಲ್ಲಿ ಉಚಿತವಾಗಿ ಊಟ ಪೂರೈಸುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿತ್ತು. 

‘ಬಡವರಿಗೆ ಸರ್ಕಾರ ಹಲವು ಯೋಜನೆಗಳ ಮೂಲಕ ಹಣ, ಧಾನ್ಯ ನೀಡುತ್ತಿರುವುದರಿಂದ  ಶನಿವಾರದಿಂದ ಇಂದಿರಾ ಕ್ಯಾಂಟೀನ್‌ಗಳಲ್ಲಿ ಈ ಹಿಂದಿನ ವ್ಯವಸ್ಥೆಯೇ ಅಂದರೆ ಸಬ್ಸಿಡಿ ದರದಲ್ಲಿ ಊಟ ನೀಡುವ ನಿಯಮ ಜಾರಿಗೆ ಬರಲಿದೆ’ ಎಂದು ಸರ್ಕಾರ ತಿಳಿಸಿದೆ.

‘ಸುಮಾರು 15 ಲಕ್ಷ ಕಟ್ಟಡ/ಕೂಲಿ ಕಾರ್ಮಿಕರಿಗೆ ₹ 2 ಸಾವಿರ ಮೊತ್ತದ ನಗದು ಹಾಗೂ ಅಹಾರ ಮತ್ತು ನಾಗರಿಕ  ಸರಬರಾಜು ಇಲಾಖಾ ವತಿಯಿಂದ ಪ್ರತಿ ಕೂಲಿ ಕಾರ್ಮಿಕರು/ಬಡ ಕುಟುಂಬಗಳಿಗೆ 2 ತಿಂಗಳಿಗೆ ಸಾಕಾಗುವಷ್ಟು ಅಹಾರ ಪದಾರ್ಥ ಪೂರೈಕೆ ಮಾಡಲಾಗುತ್ತಿದೆ. ಹೀಗಾಗಿ ಇಂದಿರಾ ಕ್ಯಾಂಟೀನ್‌ಗಳಲ್ಲಿ ಈ ಹಿಂದಿನ ದರದಲ್ಲಿ ಆಹಾರ ಪೂರೈಸುವ ವ್ಯವಸ್ಥೆ ಮಾಡಲಾಗುತ್ತಿದೆ, ಆಹಾರದ ದುರ್ಬಳಕೆ ಆಗುವುದನ್ನು ತಪ್ಪಿಸುವ ಉದ್ದೇಶವೂ ಇದರ ಹಿಂದೆ ಇದೆ’ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT