ರಾಜ್ಯ

ನಂಜನಗೂಡಿನಲ್ಲಿ ಕೊರೋನಾ ಸೋಂಕು: ತನಿಖೆ ನಡೆಸುವಂತೆ ಸಿದ್ದರಾಮಯ್ಯ ಆಗ್ರಹ

Shilpa D

ಮೈಸೂರು: ನಂಜನಗೂಡು ಔಷಧ ಕಂಪನಿಯಲ್ಲಿ ಕೊರೋನಾ ಸೋಂಕು ಹೇಗೆ ಹರಡಿತು ಎಂಬ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾಡಳಿತಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾ ವೈರಸ್‌ ವ್ಯಾಪಕವಾಗಿ ಹರಡುತ್ತಿರುವುದರಿಂದ ವಿಧಾನಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಶುಕ್ರವಾರ ಮೈಸೂರಿಗೆ ಭೇಟಿ ನೀಡಿ  ಪರಿಸ್ಥಿತಿಯನ್ನು ಅವಲೋಕಿಸಿದರು. 

ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ಅವರು, ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಕೊರೊನಾ ಸೋಂಕಿಗೆ ಪ್ರಮುಖ ಕಾರಣವಾದ ಜ್ಯುಬಿಲೆಂಟ್ ಕಾರ್ಖಾನೆ, ಕಾರ್ಮಿಕರ ಪರಿಸ್ಥಿತಿ, ರೈತರಿಗೆ ಉಂಟಾಗಿರುವ ಸಮಸ್ಯೆ, ಕರ್ನಾಟಕ, ಕೇರಳ ಗಡಿ ವಿಚಾರದ ಬಗ್ಗೆಯೂ ಸಿದ್ದರಾಮಯ್ಯ ಅವರು ಅಧಿಕಾರಿಗಳ ಜೊತೆ ಚರ್ಚಿಸಿದರು. ಜಿಲ್ಲಾಧಿಕಾರಿ ಅಭಿರಾಮ್ ಶಂಕರ್ ಇದ್ದರು.

ಇನ್ನು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಹೋಗುತ್ತಿದೆ. ಇದೀಗ ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದ್ದು, ಸ್ಥಳೀಯರನ್ನು ಆತಂಕಕ್ಕೆ ದೂಡಿದೆ. ನಂಜನಗೂಡು ತಾಲೂಕಿನ ಜ್ಯುಬಿಲಿಯಂಟ್ ಔಷಧ ತಯಾರಿಕಾ ಕಂಪನಿಯ ಗುಣಮಟ್ಟ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯಿಂದ ಜಿಲ್ಲೆಯಲ್ಲಿ ಈವರೆಗೆ 16 ಜನರಿಗೆ ಸೋಂಕು ತಗುಲಿರುವುದು ಖಚಿತವಾಗಿದೆ.

SCROLL FOR NEXT