ರಾಜ್ಯ

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನಾಕಾರಿ ಸುದ್ದಿ: ದ.ಕ.ಜಿಲ್ಲೆಯಲ್ಲಿ ನಾಲ್ಕು ಕ್ರಿಮಿನಲ್ ಪ್ರಕರಣ ದಾಖಲು

Raghavendra Adiga

ಮಂಗಳೂರು: ಕೋವಿಡ್ 19 ಸೋಂಕು ಹರಡುತ್ತಿರುವ ಸಂದರ್ಧದಲ್ಲೇ ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಹಬ್ಬಿಸುವ ಪ್ರಕರಣಗಳೂ ಹೆಚ್ಚಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂತಹ ನಿಂದನಾತ್ಮಕವಾಗಿ ಹಾಗೂ ಕೋಮು ಪ್ರಚೋದನಾಕಾರಿಯಾಗಿ ಸುದ್ದಿ ಹಬ್ಬಿಸಿದ ನಾಲ್ಕು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಹೇಳಿಕೆ ಬಿಡುಗಡೆ ಮಾಡಿದ್ದು, ಇತ್ತೀಚಿನ ದಿನಗಳಲ್ಲಿ ಕೋವಿಡ್ 19 ಕೊರೋನಾ ವೈರಸ್‌ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಬ್ಬುತ್ತಿದ್ದು, ಈ ನಡುವೆ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ನಿಂದನಾತ್ಮಕವಾಗಿ ಹಾಗೂ ಕೋಮು ಪ್ರಚೋದನಾಕಾರಿಯಾಗಿ ಸುದ್ದಿಗಳನ್ನು ಪ್ರಸಾರಪಡಿಸುತ್ತಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ 4 ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ. ಮುಂದಿನ ದಿನಗಳಲ್ಲಿಯೂ ಈ ರೀತಿಯ ಯಾವುದೇ ಕೋಮಿನ ಧಾರ್ಮಿಕತೆಗೆ ಧಕ್ಕೆಯಾಗುವಂತೆ ಫೇಸ್‌ಬುಕ್‌/ವ್ಯಾಟ್ಸಪ್‌ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಾಕಾರಿ ಸುದ್ದಿ/ಚಿತ್ರಗಳನ್ನು ಪ್ರಚಾರಪಡಿಸಿದಲ್ಲಿ ಅಂತಹ ಕಿಡಿಗೇಡಿಗಳ ಮೊಬೈಲ್ ವಶಪಡಿಸಿಕೊಂಡು ಅವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಈಗಾಗಲೇ ಹೋಂ ಕ್ವಾರಂಟೈನ್ ನಲ್ಲಿರುವ ವ್ಯಕ್ತಿಗಳು ಇಂತಹ ಕೃಕೃತ್ಯದಲ್ಲಿ ಭಾಗಿಯಾಗಿದ್ದರೆ ಅಂತಹವರನ್ನು ಆಸ್ಪತ್ರೆಯಲ್ಲಿ ಕ್ವಾರಂಟೈನ್‌ನಲ್ಲಿಟ್ಟು ಕ್ವಾರಂಟೈನ್‌ ಅವಧಿ ಮುಗಿದ ಕೂಡಲೇ ಅವರ ಮೇಲೆ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ

SCROLL FOR NEXT