ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾ ವೈರಸ್: ಪ್ರಾಣಿಗಳ ಮೇಲೆ ನಿಗಾ ಇಡಲು ಸೂಚನೆ

ನ್ಯೂಯಾರ್ಕ್ ಮೃಗಾಲಯದಲ್ಲಿ ಹುಲಿಯೊಂದರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭಾರತೀಯ ಪ್ರಾದಿಕಾರವು ಕ್ರಮ ಕೈಗೊಳ್ಳಲು ಮುಂದಾಗಿದೆ.

ಬೆಂಗಳೂರು: ನ್ಯೂಯಾರ್ಕ್ ಮೃಗಾಲಯದಲ್ಲಿ ಹುಲಿಯೊಂದರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭಾರತೀಯ ಪ್ರಾದಿಕಾರವು ಕ್ರಮ ಕೈಗೊಳ್ಳಲು ಮುಂದಾಗಿದೆ.

ಹುಲಿ ಮೀಸಲು ಅರಣ್ಯ ಪ್ರದೇಶ, ಮೃಗಾಲಯ, ರಾಷ್ಟ್ರೀಯ ಉದ್ಯಾನವನಗಳಲ್ಲಿ ಪ್ರಾಣಿಗಳೊಂದಿನೆ ಮಾನವ ಸಂಪರ್ಕ ಕಡಿಮೆ ಮಾಡಲು ಸೂಚಿಸಿದೆ. ಅನಾರೋಗ್ಯ ಪೀಡಿತ ಪ್ರಾಣಿಗಳ ಗಂಟಲು ದ್ರವದ ಮಾದರಿಯನ್ನು ಪ್ರಯೋಗಾಲಯಗಳಿಗೆ ಕಳುಹಿಸಲು  ಆದೇಶಿಸಿದೆ.

ಕೊರೊನಾ ಸೋಂಕಿತ ವ್ಯಕ್ತಿಯೊಬ್ಬ ಆರೈಕೆ ಮಾಡುತ್ತಿದ್ದ ಹುಲಿಗೆ ಕೊರೊನಾ ಸೋಂಕು ತಗುಲಿರುವ ಘಟನೆ ಇಲ್ಲಿನ ಬ್ರಾಂಕ್ಸ್ ಪ್ರಾಣಿ ಸಂಗ್ರಹಾಲಯದಲ್ಲಿ ವರದಿಯಾಗಿದೆ.

ನಾಲ್ಕು ವರ್ಷದ ಹುಲಿಗೆ ಈ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಬೆಳವಣಿಗೆ ಅಪರೂಪದ್ದಾಗಿದ್ದು, ಕೊರೊನಾ ಸೋಂಕಿತರು ಆದಷ್ಟು ಸಾಕು ಪ್ರಾಣಿಗಳಿಂದಲೂ ದೂರ ಇರುವಂತೆ ಪ್ರಾಣಿಸಂಗ್ರಹಾಲಯದ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಅಮೆರಿಕಾದಲ್ಲಿ ಕೊರೊನಾ ಸೋಂಕು ಕಾರಣ ಮಾರ್ಚ್ 16ರಿಂದ ಈ ಪ್ರಾಣಿಸಂಗ್ರಹಾಲಯವನ್ನು ಸಾರ್ವಜನಿಕರ ಭೇಟಿಗೆ ನಿರ್ಬಂಧ ವಿಧಿಸಿ ಬಂದ್ ಮಾಡಲಾಗಿದೆ. ಆದರೆ, ಕೊರೊನಾ ಸೋಂಕಿತ ವ್ಯಕ್ತಿ ಈ ಹೆಣ್ಣು ಹುಲಿಗೆ ಆಹಾರ ಕೊಡುವುದು ಹಾಗೂ ಇತರೆ ಕೆಲಸ ನಿರ್ವಹಿಸುತ್ತಿದ್ದರು. ಆ ಸಮಯದಲ್ಲಿ ತಗುಲಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಈಗಾಗಗಲೇ ಕರ್ನಾಟಕದ ಝೂಗಳನ್ನು ಸಾರ್ವಜನಿಕರೆ ಪ್ರವೇಶಕ್ಕೆ ನಿಷೇಧಿಸಲಾಗಿದೆ. ಅದೇ ರೀತಿ ದೇಶದಲ್ಲಿರುವ ಎಲ್ಲಾ ಮೃಗಾಲಯ, ಪ್ರಾಣಿಗಳ ಉದ್ಯಾನವನ ಮತ್ತು ಹುಲಿ ಸಂರಕ್ಷಣಾ ಕೇಂದ್ರಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡು ಪರಿಕ್ಷೆಗೆ ಕಳುಹಿಸುವಂತೆ ತಿಳಿಸವಾಗಿದೆ.

ರಾಜ್ಯದ 9 ಮೃಗಾಲಯಳನ್ನು ಮುಚ್ಚಲಾಗಿದೆ. ಇಲ್ಲಿನ ಸಿಬ್ಬಂದಿಗಳಿಗೂ ಪ್ರಾಣಿಗಳಿಗೆ ನೇರ ಸಂಪರ್ಕವಿರುವುದಿಲ್ಲ, ಯಾವುದೇ ಪ್ರಾಣಿ ಅನಾರೋಗ್ಯಕ್ಕೊಳಗಾದರೇ ತಕ್ಷಣ ತಿಳಿಸುವಂತೆ ತಿಳಿಸಲಾಗಿದೆ. ಜೊತೆಗೆ ಕೊರೋನಾ ಪೀಡಿತ ಪ್ರದೇಶದಿಂದ ಬರುವ ಸಿಬ್ಬಂದಿಗೆ ಕರ್ತವ್ಯಕ್ಕೆ ಬಾರದಂತೆಸೂಚಿಸಲಾಗಿದೆ ಎಂದು ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!