ರಾಜ್ಯ

ಏಪ್ರಿಲ್ 14 ನಂತರ ಲಾಕ್‍ಡೌನ್‍ ಮುಂದುವರಿಸದಂತೆ ಪ್ರಧಾನಿ, ಮುಖ್ಯಮಂತ್ರಿಗೆ ಉದ್ಯಮಿಗಳಿಂದ ಮನವಿ

 ಸದ್ಯ ಜಾರಿಯಲ್ಲಿರುವ ಲಾಕ್‍ಡೌನ್‍ ಅನ್ನು ಏಪ್ರಿಲ್ 14ರ ನಂತರ ಮುಂದುವರಿಸದಂತೆ ಕೈಗಾರಿಕೋದ್ಯಮಿಗಳು ಮತ್ತು ಉದ್ಯಮಿಗಳು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಮತ್ತು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. 

ಬೆಂಗಳೂರು: ಸದ್ಯ ಜಾರಿಯಲ್ಲಿರುವ ಲಾಕ್‍ಡೌನ್‍ ಅನ್ನು ಏಪ್ರಿಲ್ 14ರ ನಂತರ ಮುಂದುವರಿಸದಂತೆ ಕೈಗಾರಿಕೋದ್ಯಮಿಗಳು ಮತ್ತು ಉದ್ಯಮಿಗಳು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಮತ್ತು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. 

ಲಾಕ್‍ಡೌನ್‍ ನಂತರ ಕೈಗಾರಿಕೆಗಳ ಉತ್ಪಾದನೆ ಸ್ಥಗಿತಗೊಂಡಿದೆ. ಕೋಟ್ಯಂತರ ಜನರು ನಿರುದ್ಯೋಗಿಗಳಾಗಿದ್ದಾರೆ ಮತ್ತು ಕೈಗಾರಿಕೆಗಳು ಭಾರಿ ನಷ್ಟವನ್ನು ಅನುಭವಿಸುತ್ತಿವೆ ಎಂದು ದಕ್ಷಿಣ ಭಾರತದ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಉದ್ಯಮಗಳ (ಎಂಎಸ್‌ಎಂಇ) ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಆರ್.ರಾಜು ಮನವಿ ಪತ್ರದಲ್ಲಿ ತಿಳಿಸಿದ್ದಾರೆ. 

ಮನವಿ ಪತ್ರದ ನಕಲು ಪ್ರತಿಯನ್ನು ಇಲ್ಲಿ ಪತ್ರಿಕಾ ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗಿದೆ. 

ಕಳೆದ ತಿಂಗಳಿನಿಂದ ಉತ್ಪಾದನೆ ಕುಂಠಿತಗೊಂಡು ದೇಶದ ಆರ್ಥಿಕತೆಯ ಮೇಲೆ ತೀವ್ರ ಪರಿಣಾಮ ಬೀರಿದೆ. ಇದು, ಇಡೀ ಉದ್ಯಮ ಸಮುದಾಯದ ಮೇಲೆ ತೀವ್ರ ಹೊಡೆತ ಬಿದ್ದಿದೆ. ಉದ್ಯಮಗಳು ನೌಕರರಿಗೆ ಸಂಬಳವನ್ನು ಪಾವತಿಸಲು ಸಾಧ್ಯವಾಗುತ್ತಿಲ್ಲ. ಉದ್ಯಮಗಳ ಕಾರ್ಯಾರಂಭಕ್ಕೆ ಅವಕಾಶ ಮಾಡಿಕೊಟ್ಟರೆ ಕೆಲಸದ ಸ್ಥಳದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲಾಗುವುದಾಗಿ ಮನವಿ ಮಾಡಲಾಗಿದೆ ರಾಜು ಹೇಳಿದ್ದಾರೆ. 

ಉದ್ಯಮಗಳು ಮತ್ತು ಕೈಗಾರಿಕೆಗಳು ಮುಚ್ಚಿರುವುದರಿಂದ ಎಂಎಸ್‌ಎಂಇ ವಲಯ ಪ್ರತಿದಿನ 1,000 ಕೋಟಿ ರೂ.ಗಳಿಂದ 1500 ಕೋಟಿ ರೂ.ಗೆ ನಷ್ಟವಾಗುತ್ತಿದೆ. ಸರ್ಕಾರ 500 ಕೋಟಿ ರೂ.ಜಿಎಸ್‌ಟಿಯನ್ನು ಕಳೆದುಕೊಳ್ಳುತ್ತಿದೆ. ಭಾರಿ ನಷ್ಟವನ್ನು ಅನುಭವಿಸಿದ ನಂತರ ಉದ್ಯಮ ಮುಂದುವರಿಸುವುದು ತುಂಬಾ ಕಷ್ಟಕರವಾಗುತ್ತದೆ ಎಂದು ಅವರು ಹೇಳಿದ್ದಾರೆ. 

ಅಗತ್ಯ ಸೇವೆಯಡಿಯಲ್ಲಿ ಕಾರ್ಯನಿರ್ವಹಿಸಲು ಎಂಎಸ್‌ಎಂಇಗಳಿಗೆ ಅನುಮತಿ ನೀಡಬೇಕು. ಇವು ಕಾರ್ಯನಿರ್ವಹಿಸದಿರುವುದರಿಂದ ಭಾರೀ ಕೈಗಾರಿಕೆಗಳ ಮೇಲೆ ಪರಿಣಾಮ ಬೀರುವುದರ ಜೊತೆಗೆ ನಿರುದ್ಯೋಗಕ್ಕೆ ಕಾರಣವಾಗಲಿದೆ ಎಂದು ರಾಜು ಆತಂಕ ವ್ಯಕ್ತಪಡಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!