ಸಾಂದರ್ಭಿಕ ಚಿತ್ರ 
ರಾಜ್ಯ

ಸಾಮೂಹಿಕ ವಿವಾಹದ ಮೇಲೆ ಕೊರೋನಾ ಕರಿನೆರಳು: ಸರ್ಕಾರದ ಸಪ್ತಪದಿ ಯೋಜನೆ ಮುಂದೂಡಿಕೆ

ರಾಜ್ಯ ಸರ್ಕಾರದ ಮಹತ್ವದ ಸಪ್ತಪದಿ ಯೋಜನೆ ಮೇಲೆ ಕೊರೋನಾ ಕರಿನೆರಳು ಆವರಿಸಿದ್ದು, ಸಾಮೂಹಿಕ ವಿವಾಹ ಯೋಜನೆ ಮುಂದೂಡಲಾಗಿದೆ.

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವದ ಸಪ್ತಪದಿ ಯೋಜನೆ ಮೇಲೆ ಕೊರೋನಾ ಕರಿನೆರಳು ಆವರಿಸಿದ್ದು, ಸಾಮೂಹಿಕ ವಿವಾಹ ಯೋಜನೆ ಮುಂದೂಡಲಾಗಿದೆ.

ಏಪ್ರಿಲ್ 26 ರಂದು ನಿಗದಿಯಾಗಿದ್ದ ಪ್ರಥಮ ಹಂತದ ಸಪ್ತಪದಿ ಯೋಜನೆಯನ್ನು ಮುಂದೂಡಿರುವುದಾಗಿ ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್ 26 ರಂದು ಸಪ್ತಪದಿ ಯೋಜನೆಯಡಿ‌ 1.5 ಸಾವಿರ ವಧು ವರರು ವಿವಾಹಕ್ಕೆ ನೋಂದಣಿ ಮಾಡಿಕೊಂಡಿದ್ದರು. ಯೋಜನೆಯಡಿ ಬಡ ವಧು ವರರಿಗೆ ಸರ್ಕಾರದಿಂದ ಉಚಿತ ವಿವಾಹ ಭಾಗ್ಯ ನೀಡಲಾಗುತ್ತಿದ್ದು, ಆದರೀಗ ಕೊರೋನಾದಿಂದ ಸಪ್ತಪದಿ ಯೋಜನೆ ಮುಂದೂಡಿಕೆಯಾಗಿದೆ ಎಂದು ತಿಳಿಸಿದರು.

ಮೇ 26 ರಂದು ಎರಡನೇ ಹಂತದ ಸಪ್ತಪದಿ ಯೋಜನೆಯಡಿ ಸಾಮೂಹಿಕ ವಿವಾಹ ಕಾರ್ಯಕ್ರಮ ಇದ್ದು, ಅದೇ ದಿನ ಮೊದಲ ಮತ್ತು ಎರಡನೇ ಹಂತಗಳನ್ನು ಸೇರಿಸಿ ಒಂದೇ ಹಂತದಲ್ಲಿ ಸಾಮೂಹಿಕ ವಿವಾಹ‌ ಕಾರ್ಯಕ್ರಮ ನಡೆಸಲಾಗುವುದು. ಇದಕ್ಕೆ‌ ಮುಖ್ಯಮಂತ್ರಿಗಳು ಸಹ ಒಪ್ಪಿಗೆ ಸೂಚಿಸಿದ್ದಾರೆ ಎಂದರು ಅವರು ಸ್ಪಷ್ಟಪಡಿಸಿದರು.

ಲಾಕ್‌ಡೌನ್ ಪರಿಸ್ಥಿತಿಯಲ್ಲಿ ಎ ದರ್ಜೆಯ ಎಲ್ಲ ದೇವಸ್ಥಾನಗಳಲ್ಲಿ ಸಿಬ್ಬಂದಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಮುಜರಾಯಿ ಇಲಾಖೆ ಅಡಿ ಸಂಬಳ ಪಡೆಯುತ್ತಿರುವ ಅರ್ಚಕರಿಗೆ, ಕಲಾವಿದರಿಗೆ ಮತ್ತು ದೇವಾಲಯ ಸ್ವಚ್ಛ ಮಾಡುವ ಸಿಬ್ಬಂದಿಗೆ ಸಂಬಳ ನಿಲ್ಲಿಸದಂತೆ ಸೂಚನೆ ನೀಡಿದ್ದೇನೆ ಎಂದರು.

ಹಲವು ಕಡೆ ಮಂಗಳಾರತಿ ತಟ್ಟೆಗೆ ದಕ್ಷಿಣೆ ಇಲ್ಲದೆ ಹಲವು ಅರ್ಚಕರು ಸಂಕಷ್ಟದಲ್ಲಿ ಇದ್ದಾರೆ. ಇವರಿಗೆ ಯಾವ ರೀತಿಯಲ್ಲಿ ನೆರವು ನೀಡಬಹುದು ಎಂಬ ಚಿಂತನೆ ನಡೆದಿದೆ. ಉಳಿದಂತೆ ರಾಜ್ಯದ ನಾನಾ ದೇವಸ್ಥಾನಗಳಲ್ಲಿ ಆಡಳಿತ ಮಂಡಳಿ‌ ವತಿಯಿಂದಲೇ ರಾಜ್ಯದ 37 ಸಾವಿರ ಮಂದಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT