ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕೊರೋನಾ ಹಬ್ಬಿಸುವ ಮತಾಂಧರಿಗೆ ಕಾನೂನು ಕ್ರಮದ ಎಚ್ಚರಿಕೆ ಕೊಡಿ, ಸಹಕರಿಸದಿದ್ದರೆ ಗುಂಡಿಕ್ಕಿ: ಸರ್ಕಾರಕ್ಕೆ ಯತ್ನಾಳ್ ಸವಾಲ್!

ಕೊರೋನಾ ವೈರಸ್ ಹರಡುವಿಕೆ ವಿಷಯದಲ್ಲಿ ಮುಸ್ಲಿಮರ ವಿರುದ್ಧ ವಿನಾಕಾರಣ ಆರೋಪ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂಬ ಯಡಿಯೂರಪ್ಪ ಎಚ್ಚರಿಕೆಗೆ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗುತ್ತಿದೆ.

ಸಂಗ್ರಹ ಚಿತ್ರ
Srinivas Rao BV
Updated On : 8 Apr 2020, 1:39 am

ಬೆಂಗಳೂರು: ಕೊರೋನಾ ವೈರಸ್ ಹರಡುವಿಕೆ ವಿಷಯದಲ್ಲಿ ಮುಸ್ಲಿಮರ ವಿರುದ್ಧ ವಿನಾಕಾರಣ ಆರೋಪ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂಬ ಯಡಿಯೂರಪ್ಪ ಎಚ್ಚರಿಕೆಗೆ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗುತ್ತಿದೆ. 

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ಬಗ್ಗೆ ಫೇಸ್ ಬುಕ್ ಪೋಸ್ಟ್ ನಲ್ಲಿ ಬರೆದಿದ್ದು, ಎಚ್ಚರಿಕೆ ನೀಡುವುದಿದ್ದರೆ ಕೊರೋನಾ ಹರಡುತ್ತಿರುವ ತಬ್ಲಿಘಿ ಮತಾಂಧರಿಗೆ, ಅವರನ್ನು ಸಮರ್ಥಿಸುತ್ತಿರುವ ಧಾರ್ಮಿಕ, ರಾಜಕೀಯ ನಾಯಕರಿಗೆ ಎಚ್ಚರಿಕೆ ನೀಡಬೇಕೆ ಹೊರತು ದೇಶಭಕ್ತ ಸಮುದಾಯಗಳಿಗೆ ಅಲ್ಲ ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. 

ತಬ್ಲಿಘಿ ಜಮಾತ್ ನ ಜಿಹಾದಿಗಳಿಗೆ ಅಂತಿಮ ಎಚ್ಚರಿಕೆ ಕೊಡಿ, ಸಹಕರಿಸದಿದ್ದರೆ ಗುಂಡಿಕ್ಕಿ, ಇದು ಪ್ರಚೋದನೆ ಎನಿಸಿದರೆ ನನ್ನ ಮೇಲೆ ಕ್ರಮ ಕೈಗೊಳ್ಳಿ ಎಂದು ಯತ್ನಾಳ್ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಅವರ ಈ ಪೋಸ್ಟ್ ಈಗ ವೈರಲ್ ಆಗತೊಡಗಿದೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement