ಬೆಂಗಳೂರು: 20 ಐವಿಆರ್ ಎಸ್ ಲೈನ್ ಗಳೊಂದಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮೆಡಿಕಲ್ ಹೆಲ್ಪ್ ಲೈನ್ ಆರಂಭಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕೆಪಿಸಿಸಿ ಘಟಕದ ವೈದ್ಯರು ಹಾಗೂ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರ ಜೊತೆಗ ಮಾತನಾಡಿದ ಶಿವಕುಮಾರ್, ಕೆಲ ಕಿಡಿಗೇಡಿಗಳು, ಸಮಾಜದ ಶಾಂತಿ ಹಾಳು ಮಾಡಲು ಸುಳ್ಳು ಸುದ್ದಿ ಹರಡಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.
ನಕಲಿ ಸಂದೇಶಗಳ ಪರಿಣಾಮವಾಗಿ ಕೆಲವು ವ್ಯಕ್ತಿಗಳನ್ನು ಗ್ರಾಮಗಳಿಂದ ಬಹಿಷ್ಕರಿಸಲಾಗಿದೆ. ಇಂತವರ ವಿರುದ್ಧ ಮುಖ್ಯಮಂತ್ರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಶಿವಕುಮಾರ್ ಒತ್ತಾಯಿಸಿದ್ದಾರೆ.ಇಡೀ ಮುಸ್ಲಿಂ ಸಮುದಾಯವನ್ನು ನಿಂದಿಸುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.