ರಾಜ್ಯ

ದೊಡ್ಡಬಳ್ಳಾಪುರ ಎಪಿಎಂಸಿ ಮಾರುಕಟ್ಟೆಗೆ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ; ಸ್ವಚ್ಛತೆಗೆ ಆದ್ಯತೆ ನೀಡುವಂತೆ ಸೂಚನೆ

Srinivasamurthy VN

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಕೃಷಿ ಉತ್ಪನ್ನ ಮಾರುಕಟ್ಟೆಗೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಬುಧವಾರ ಮುಂಜಾನೆ ಭೇಟಿ ನೀಡಿ ಪರಿಶೀಲಿಸಿದರು.

ಕೆಲವು ತುರ್ತು ಕ್ರಮಗಳನ್ನು ತಕ್ಷಣದಿಂದಲೇ ಕೈಗೊಳ್ಳುವಂತೆ ಎಪಿಎಂಸಿ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಶಾಸಕರಾದ ಟಿ. ವೆಂಕಟರಮಣಯ್ಯ, ಎಪಿಎಂಸಿ ನಿರ್ದೇಶಕರಾದ ಕರೀಗೌಡ, ಜಿಲ್ಲಾಧಿಕಾರಿಗಳಾದ ಡಾ.ರವೀಂದ್ರ ಇದ್ದರು. ಎಪಿಎಂಸಿ  ಆವರಣದಲ್ಲಿ ಸ್ವಚ್ಛತೆಗೆ ಆದ್ಯತೆ ಕೊಡಬೇಕು. ಆವರಣದಲ್ಲಿ ಪ್ರತಿದಿನ ಫಾಗಿಂಗ್ ವ್ಯವಸ್ಥೆಯನ್ನು ಮಾಡಬೇಕು. ಶುದ್ಧ ಕುಡಿಯುವ ನೀರಿಗೆ ಆದ್ಯತೆ ಕೊಡಬೇಕು. ಕೊರೋನಾ ವೈರಸ್ ಸಾಂಕ್ರಾಮಿಕ ರೋಗವಾದ್ದರಿಂದ ಜಾಗೃತಿಯ ಅಗತ್ಯವಿದ್ದು, ಧ್ವನಿವರ್ಧಕಗಳ ಮೂಲಕ ರೈತರಿಗೆ ಜಾಗೃತಿ  ಮೂಡಿಸುವಂತೆ ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯಾರೂ ಸಹ ಹಸಿವಿನಿಂದ ಇರಬಾರದು ಎಂಬುದು ಸರ್ಕಾರದ ಉದ್ದೇಶವಾಗಿದ್ದು, ಮುಖ್ಯಮಂತ್ರಿಗಳು ಈ ಬಗ್ಗೆ ಸಚಿವರಿಗೆ ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪ್ರತಿ ಜಿಲ್ಲೆಗಳಿಗೆ 20ರಿಂದ 25 ಸಾವಿರ ಆಹಾರ ಕಿಟ್ ಗಳನ್ನು ಕೂಲಿಕಾರ್ಮಿಕರಿಗೆ ಒದಗಿಸಲು ಮುಖ್ಯಮಂತ್ರಿಗಳು  ಮತ್ತು ಕಾರ್ಮಿಕ ಸಚಿವರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ ಎಂದು ಸಚಿವರು ತಿಳಿಸಿದರು. ಇದೇ ವೇಳೆ ರೈತರು, ವರ್ತಕರು ಹಾಗೂ ಅಧಿಕಾರಿಗಳಿಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಪ್ರಮಾಣವನ್ನು ಮಾಡಿಸಿದರು.

ಎಲ್ಲ ಎಪಿಎಂಸಿಯಲ್ಲೂ ಉಚಿತ ಮಾಸ್ಕ್
ಎಲ್ಲ 162 ಎಪಿಎಂಸಿ ವತಿಯಿಂದ ಉಚಿತ ಸ್ಯಾನಿಟೇಸೇಶನ್ ಹಾಗೂ ಮಾಸ್ಕ್ ಗಳನ್ನು ವಿತರಣೆ ಮಾಡಬೇಕು. ಈ ಕ್ಷಣದಿಂದಲೇ ಇದು ಜಾರಿಗೆ ಬರಬೇಕು ಎಂದು ಸಚಿವರು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ರೈತರು, ಎಪಿಎಂಸಿ ವರ್ತಕರ ಜೊತೆ ಸಮಾಲೋಚನೆ ನಡೆಸಿದ  ಸಚಿವರು, ಅವರ ಅಹವಾಲುಗಳನ್ನು ಆಲಿಸಿದರು. ಇದೇ ವೇಳೆ ಹೂವಿನ ಮಾರುಕಟ್ಟೆ ಸಮಸ್ಯೆ ಬಗ್ಗೆ ಸಚಿವರ ಗಮನಕ್ಕೆ ತಂದಾಗ ಸ್ಪಂದಿಸಿದ ಸಚಿವರು, ಬೆಂಗಳೂರು ಎರ್ ಪೋರ್ಟ್ ರಸ್ತೆಯಲ್ಲಿ ನಿರ್ಮಾಣಕ್ಕೆ ಸರ್ಕಾರ ಕ್ರಮ ವಹಿಸಿದೆ ಎಂದು ತಿಳಿಸಿದರು.

ಅಲ್ಲದೆ, ರೈತರ ಸಮಸ್ಯೆಗಳ ಬಗ್ಗೆ   ಚರ್ಚಿಸಲು ಸರ್ಕಾರ ಮತ್ತು ಮುಖ್ಯಮಂತ್ರಿಗಳು ಸದಾ ಸಿದ್ಧ ಎಂದು ಮಾನ್ಯ ಸಚಿವರು ಭರವಸೆ ನೀಡಿದರು. ಎಪಿಎಂಸಿ ಆವರಣದಲ್ಲಿ ಸ್ವಚ್ಛತೆಗೆ ಆದ್ಯತೆ ಕೊಡಬೇಕು. ಆವರಣದಲ್ಲಿ ಪ್ರತಿದಿನ ಫಾಗಿಂಗ್ ವ್ಯವಸ್ಥೆಯನ್ನು ಮಾಡಬೇಕು. ಶುದ್ಧ ಕುಡಿಯುವ ನೀರಿಗೆ ಆದ್ಯತೆ ಕೊಡಬೇಕು.  ಕೋವಿಡ್-19 ವೈರಸ್ ಸಾಂಕ್ರಾಮಿಕ ರೋಗವಾದ್ದರಿಂದ ಜಾಗೃತಿಯ ಅಗತ್ಯವಿದ್ದು, ಧ್ವನಿವರ್ಧಕಗಳ ಮೂಲಕ ರೈತರಿಗೆ ಜಾಗೃತಿ ಮೂಡಿಸುವಂತೆ ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಶಾಸಕರಾದ ಟಿ. ವೆಂಕಟರಮಣಯ್ಯ, ಎಪಿಎಂಸಿ ನಿರ್ದೇಶಕರಾದ ಕರೀಗೌಡ, ಜಿಲ್ಲಾಧಿಕಾರಿಗಳಾದ ಡಾ.ರವೀಂದ್ರ ಇದ್ದರು.

SCROLL FOR NEXT