ರಾಜ್ಯ

ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯ ಆಸ್ತಿ ತೆರಿಗೆ ರಿಯಾಯಿತಿ ಅವಧಿ ಮೇ ಅಂತ್ಯದವರೆಗೆ ವಿಸ್ತರಣೆ

Lingaraj Badiger

ಬೆಂಗಳೂರು: ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಆಸ್ತಿ ತೆರಿಗೆ ಪಾವತಿ ವೇಳೆ ಶೇ.5ರಷ್ಟು ರಿಯಾಯಿತಿ ಪಡೆಯುವ ಅವಕಾಶವನ್ನು ಮೇ 31ರವರೆಗೆ ವಿಸ್ತರಿಸಿ ಪೌರಾಡಳಿತ ನಿರ್ದೇಶನಾಲಯ ಆದೇಶ ಹೊರಡಿಸಿದೆ. 

ಇದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಹೊರತುಪಡಿಸಿ ಉಳಿದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ತೆರಿಗೆದಾರರಿಗೆ ಅನ್ವಯವಾಗಲಿದೆ. ಬಿಬಿಎಂಪಿ ವ್ಯಾಪ್ತಿಯ ಜನರು ಈ ತಿಂಗಳ ಅಂತ್ಯದೊಳಗೆ ತೆರಿಗೆ ಪಾವತಿಸಬೇಕಿದೆ. 

ಈ ಹಿಂದೆ ಏಪ್ರಿಲ್‌ ತಿಂಗಳಲ್ಲೇ ಆಸ್ತಿ ತೆರಿಗೆ ಪಾವತಿಸುವವರಿಗೆ ಪ್ರತಿವರ್ಷವೂ ಶೇ.5ರಷ್ಟು ರಿಯಾಯಿತಿ ನೀಡಲಾಗುತ್ತಿತ್ತು. ಆದರೆ, ಏ. 14ರವರೆಗೆ ಲಾಕ್‌ಡೌನ್‌ ಜಾರಿಯಲ್ಲಿರುವುದರಿಂ ಜನರು ನಗರ ಸ್ಥಳೀಯ ಸಂಸ್ಥೆಗಳ ಕಚೇರಿಗಳಿಗೆ ಭೇಟಿ ನೀಡಿ ಆಸ್ತಿ ತೆರಿಗೆ ಪಾವತಿಸಲು ಅಸಾಧ್ಯ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ತೆರಿಗೆಯಲ್ಲಿ ರಿಯಾಯಿತಿ ಪಡೆಯುವ ಅವಧಿ ವಿಸ್ತರಿಸಬೇಕು ಎಂದು ಅನೇಕ ಸ್ಥಳೀಯ ಸಂಸ್ಥೆಗಳು ಪೌರಾಡಳಿತ ನಿರ್ದೇಶನಾಲಯಕ್ಕೆ ಮನವಿ ಸಲ್ಲಿಸಿದ್ದವು.

SCROLL FOR NEXT