ರಾಜ್ಯ

ಇಂದಿರಾ ಕ್ಯಾಂಟೀನ್ ಗಳಿಗೆ ಸಿದ್ದರಾಮಯ್ಯ ಭೇಟಿ, ಪರಿಶೀಲನೆ

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬೆಂಗಳೂರಿನ ವಿವಿಧ ಬಡಾವಣೆಯ ಇಂದಿರಾ ಕ್ಯಾಂಟೀನ್ ಗಳಿಗೆ ಭೇಟಿ ನೀಡಿ ಅಲ್ಲಿ ನೀಡಲಾಗುತ್ತಿರುವ ಆಹಾರ ಪದಾರ್ಥಗಳ ಪರಿಶೀಲನೆ ನಡೆಸಿದರು.

ಬೆಂಗಳೂರು : ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬೆಂಗಳೂರಿನ ವಿವಿಧ ಬಡಾವಣೆಯ ಇಂದಿರಾ ಕ್ಯಾಂಟೀನ್ ಗಳಿಗೆ ಭೇಟಿ ನೀಡಿ ಅಲ್ಲಿ ನೀಡಲಾಗುತ್ತಿರುವ ಆಹಾರ ಪದಾರ್ಥಗಳ ಪರಿಶೀಲನೆ ನಡೆಸಿದರು.

ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತವಾಗಿ ನೀಡುತ್ತಿದ್ದ ಊಟ ಮತ್ತು ತಿಂಡಿಗೆ ಸರ್ಕಾರ ಇತ್ತೀಚೆಗೆ ದರ ನಿಗದಿ ಮಾಡಿದೆ. ಉಚಿತವಾಗಿ ನೀಡಿದರೆ ದುರುಪಯೋಗವಾಗುತ್ತದೆ ಎಂಬ ಕಾರಣಕ್ಕೆ ಸರ್ಕಾರ ಈ ಕ್ರಮ ಕೈಗೊಂಡಿದೆ. ಈ ಸಂಬಂಧ ಸಿದ್ದರಾಮಯ್ಯ ಅವರು ಸರ್ಕಾರಕ್ಕೆ ಪತ್ರವನ್ನೂ ಬರೆದಿದ್ದರು. ಮುಖ್ಯಮಂತ್ರಿಯವರೂ ದೂರವಾಣಿ ಮೂಲಕ ಮಾತುಕತೆ ನಡೆಸಿ ಪರಿಶೀಲಿಸುವ ಭರವಸೆ ನೀಡಿದ್ದರು.


ಈ ಹಿನ್ನೆಲೆಯಲ್ಲಿ ನಿನ್ನೆ ಸಿದ್ದರಾಮಯ್ಯ ಅವರು ಕ್ಯಾಂಟೀನ್ ಗಳಿಗೆ ಭೇಟಿ ನೀಡಿ ರಿಯಾಲಿಟಿ ಚೆಕ್ ಮಾಡಿದರು. ಅವರು ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರ ಜೊತೆಗೆ ಮಾತುಕತೆ ನಡೆಸಿದರು.


ಉಚಿತವಾಗಿ ನೀಡುತ್ತಿದ್ದ ಸಂದರ್ಭದಲ್ಲಿ ಕ್ಯಾಂಟೀನ್ ಗಳಲ್ಲಿ 700ಕ್ಕೂ ಅಧಿಕ ಮಂದಿ ಊಟ, ತಿಂಡಿ ಮಾಡುತ್ತಿದ್ದರು. ಅಷ್ಟು ಸಂಖ್ಯೆಯ ಪೊಟ್ಟಣಗಳು ವಿತರಣೆ ಆಗುತ್ತಿತ್ತು. ಈಗ ಅವರ ಸಂಖ್ಯೆ ಗಣನೀಯವಾಗಿ ಕುಸಿದಿದೆ. 100-150 ಮಂದಿ ಮಾತ್ರ ಹಣ ನೀಡಿ ಖರೀದಿ ಮಾಡುತ್ತಿದ್ದಾರೆ. ಹೀಗಾಗಿ ಉಚಿತವಾಗಿ ಊಟ, ತಿಂಡಿ ಪೂರೈಕೆ ಮಾಡಿದರೆ ಬಡವರಿಗೆ ಅನುಕೂಲವಾಗುತ್ತದೆ ಎಂದು ಸಾರ್ವಜನಿಕರು ಹೇಳಿದರು.


ಈ ಹಿನ್ನೆಲೆಯಲ್ಲಿ ಉಚಿತವಾಗಿ ಊಟ, ತಿಂಡಿ ನೀಡುವ ಕುರಿತು ಪರಿಶೀಲಿಸುವಂತೆ ಸಿದ್ದರಾಮಯ್ಯ ಮುಖ್ಯಮಂತ್ರಿಯವರನ್ನು ಮತ್ತೆ ಒತ್ತಾಯಿಸಿದ್ದಾರೆ.


ವಸಂತನಗರ, ಹೆಬ್ಬಾಳ ಹಾಗೂ ಆರ್.ಟಿ. ನಗರ ಬಡಾವಣೆಯ ಇಂದಿರಾ ಕ್ಯಾಂಟೀನ್ ಗಳಿಗೆ ಸಿದ್ದರಾಮಯ್ಯ ಅವರು ಭೇಟಿ ನೀಡಿದ್ದರು. ಶಾಸಕರಾದ ಬೈರತಿ ಸುರೇಶ್ ಮತ್ತಿತರರು ಜೊತೆಯಲ್ಲಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

ಮಗು ಆಡಿಸುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ; ರಕ್ಷಣೆಗೆ ಧಾವಿಸಿದ ಮಹಿಳೆ, Video ವೈರಲ್

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!