ಲಾಕ್ ಡೌನ್ ನಡುವೆಯೂ 24 ವರ್ಷಗಳ ನಂತರ ಹುತಾತ್ಮ ಯೋಧನ ಕುಟುಂಬಕ್ಕೆ ನಿವೇಶನ ಹಂಚಿಕೆ 
ರಾಜ್ಯ

ಲಾಕ್ ಡೌನ್ ನಡುವೆಯೂ 24 ವರ್ಷಗಳ ನಂತರ ಹುತಾತ್ಮ ಯೋಧನ ಕುಟುಂಬಕ್ಕೆ ನಿವೇಶನ ಹಂಚಿಕೆ

ನಾಗಲ್ಯಾಂಡ್‌ನಲ್ಲಿ 24 ವರ್ಷಗಳ ಹಿಂದೆ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ರಾಜ್ಯದ ಸೈನಿಕ ಎ.ಮುನಿಯಪ್ಪನ್ ಅವರ ಕುಟುಂಬಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಉಚಿತವಾಗಿ ನಿವೇಶನ ಹಂಚಿಕೆ ಮಾಡಲಾಗಿದೆ.

ಬೆಂಗಳೂರು: ನಾಗಲ್ಯಾಂಡ್‌ನಲ್ಲಿ 24 ವರ್ಷಗಳ ಹಿಂದೆ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ರಾಜ್ಯದ ಸೈನಿಕ ಎ.ಮುನಿಯಪ್ಪನ್ ಅವರ ಕುಟುಂಬಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಉಚಿತವಾಗಿ ನಿವೇಶನ ಹಂಚಿಕೆ ಮಾಡಲಾಗಿದೆ.

ಸೈನಿಕ ಕಲ್ಯಾಣ ಇಲಾಖೆಯ ಶಿಫಾರಸಿನ ಮೇರೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 30*40 ಅಡಿ ಅಳತೆಯ ನಿವೇಶನ ಹಂಚಿಕೆ ಮಾಡಿ ಆದೇಶ ಹೊರಡಿಸಿದೆ.

ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹುತಾತ್ಮರ ಪತ್ನಿ ಎಂ.ದೇವಿ ಅವರಿಗೆ ಪತ್ರ ಬರೆದು ವಿಷಯ ತಿಳಿಸಿದ್ದಾರೆ. ಇದರೊಂದಿಗೆ ಆದೇಶ ಪ್ರತಿಯನ್ನು ಕೂಡ ಕಳುಹಿಸಿಕೊಟ್ಟಿದ್ದಾರೆ.

ನಿಮ್ಮ ಪತಿ ಸಿಪಾಯಿ ಎ.ಮುನಿಯಪ್ಪನ್ ಅವರು ನಾಗಾಲ್ಯಾಂಡ್‌ನಲ್ಲಿ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯಲ್ಲಿ 24 ವರ್ಷಗಳ ಹಿಂದೆಯೇ ಮೃತಪಟ್ಟಿದ್ದು, ತಾವು ಕೂಡ ಈಗ ತೀವ್ರ ಅನಾರೋಗ್ಯ ಪೀಡಿತರಾಗಿರುವ ವಿಷಯ ತಿಳಿದು ಅತ್ಯಂತ ದುಃಖವಾಯಿತು. ಭಗವಂತ ನಿಮಗೆ ಆಯುರಾರೋಗ್ಯ ನೀಡಿ ರಕ್ಷಿಸಲಿ ಎಂದು ಪ್ರಾರ್ಥಿಸುತ್ತೇನೆ .ದೇಶ ಸೇವೆಗೆ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟ ಮುನಿಯಪ್ಪನ್ ಅವರ ತ್ಯಾಗ ಸ್ಮರಣೀಯ. ತಾವು ನಿವೇಶನ ಹಂಚಿಕೆಯಾಗದೆ ತೊಂದರೆ ಅನುಭವಿಸುತ್ತಿರುವ ವಿಷಯ ನನ್ನ ಗಮನಕ್ಕೆ ಬಂದಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಂದ ಮಾಹಿತಿ ತರಿಸಿ ಪರಿಶೀಲಿಸಿದಾಗ ತಮಗೆ ನಿವೇಶನ ಹಂಚಿಕೆಯಾಗಿರುವುದು ತಿಳಿದುಬಂದಿದೆ. ನಿವೇಶನ ಮಂಜೂರಾತಿ ಪತ್ರ ಇದರೊಂದಿಗೆ ಲಗತ್ತಿಸಿ ಕಳುಹಿಸಲಾಗಿದೆ. ತಮಗೆ, ತಮ್ಮ ಕುಟುಂಬದವರಿಗೆ ಮತ್ತೊಮ್ಮೆ ಶುಭ ಹಾರೈಕೆಗಳು ಎಂದು ಮುಖ್ಯಮಂತ್ರಿ ಪತ್ರದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT