ಸಾಂಕೇತಿಕ ಚಿತ್ರ 
ರಾಜ್ಯ

ರಾಯಚೂರು: ಒಂದೇ ಕುಟುಂಬದ ಮೂವರು ಮಕ್ಕಳು ಕೆರೆಪಾಲು

ನೀರು ತರಲು ಹೋಗಿ ಕಾಲು ಜಾರಿ ಕೆರೆಗೆ ಬಿದ್ದು ಒಂದೇ ಕುಟುಂಬದ ಮೂವರು ಮಕ್ಕಳು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ರೌಡಕುಂದಾ ಗ್ರಾಮದಲ್ಲಿ ನಡೆದಿದೆ.

ರಾಯಚೂರು: ನೀರು ತರಲು ಹೋಗಿ ಕಾಲು ಜಾರಿ ಕೆರೆಗೆ ಬಿದ್ದು ಒಂದೇ ಕುಟುಂಬದ ಮೂವರು ಮಕ್ಕಳು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ರೌಡಕುಂದಾ ಗ್ರಾಮದಲ್ಲಿ ನಡೆದಿದೆ.

ನಾಗರಾಜ್ (10), ಕಾರ್ತಿಕ್ (8) ಹಾಗೂ ರವಿಕುಮಾರ್ (7) ಮೃತ ಬಾಲಕರು. ಮೃತ ಬಾಲಕರು ಒಂದೇ ಕುಟುಂಬದವರಾಗಿದ್ದು, ಇಂದು ಬೆಳಗ್ಗೆ 7 ಗಂಟೆ‌ ಸುಮಾರಿಗೆ ನೀರು ತರಲು ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಈ ವೇಳೆ ಒಬ್ಬ ಬಾಲಕ ನೀರಿನಲ್ಲಿ ಮುಳುಗಿದ್ದಾನೆ. ಇದನ್ನು ನೋಡಿದ ಮತ್ತೊಬ್ಬ ಬಾಲಕ ಆತನನ್ನು ಕಾಪಾಡಲು ಹೋಗಿ ಆತನೂ ಕೆರೆಯಲ್ಲಿ ಮುಳುಗಿದ್ದು, ಇದೇ ರೀತಿ ಮೂವರು ಮಕ್ಕಳು ಒಬ್ಬರನ್ನು ಕಾಪಾಡಲು ಒಬ್ಬರು ಹೋಗಿ ಮೂವರು ನೀರು ಪಾಲಾಗಿದ್ದಾರೆ ಎನ್ನಲಾಗಿದೆ.

ಸ್ಥಳೀಯರು ಕೆರೆಯ ಬಳಿ ಹೋಗಿ ನೋಡಿದಾಗ ಬಾಲಕರು ಮೃತಪಟ್ಟಿರುವುದು ಬೆಳಕಿಗೆ ಬಂದಿದ್ದು, ತಕ್ಷಣ ಈ ಬಗ್ಗೆ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!