ಪ್ರವೀಣ್ ಸೂದ್ 
ರಾಜ್ಯ

ಯತ್ನಾಳ್, ಹೆಗಡೆ ವಿರುದ್ಧ ಕೇಸು ದಾಖಲಿಸಿ ಬಂಧಿಸಿ: ಡಿಜಿಪಿಗೆ ರಾಜ್ಯ ಕಾಂಗ್ರೆಸ್ ಮನವಿ

ಕೊರೊನಾ ಹರಡಲು ಮುಸ್ಲಿಮರು ಕಾರಣ ಎಂದು ಆರೋಪ ಮಾಡಿರುವ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಹಾಗೂ ಇಬ್ಬರು ಶಾಸಕರ ವಿರುದ್ಧ ಸ್ವಯಂ ಪ್ರೇರಣೆಯಿಂದ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ಡಿಜಿಪಿ ಪ್ರವೀಣ್ ಸೂದ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಬೆಂಗಳೂರು: ಕೊರೊನಾ ಹರಡಲು ಮುಸ್ಲಿಮರು ಕಾರಣ ಎಂದು ಆರೋಪ ಮಾಡಿರುವ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಹಾಗೂ ಇಬ್ಬರು ಶಾಸಕರ ವಿರುದ್ಧ ಸ್ವಯಂ ಪ್ರೇರಣೆಯಿಂದ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ಡಿಜಿಪಿ ಪ್ರವೀಣ್ ಸೂದ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ನಾರಾಯಣಸ್ವಾಮಿ, ವಿಧಾನಪರಿಷತ್‌ ಸದಸ್ಯ ಎಂ.ಸಿ. ವೇಣುಗೋಪಾಲ್ ಅವರನ್ನೊಳಗೊಂಡ ಕಾಂಗ್ರೆಸ್ ನಿಯೋಗವು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರನ್ನು ಬೆಂಗಳೂರಿನ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಭೇಟಿ ಮಾಡಿತು.

ಕೊರೊನಾ ಸೋಂಕು ಹರಡಿಕೆ ಸಂಬಂಧ ವದಂತಿಗಳನ್ನು ಹಬ್ಬಿಸುವುದರ ಜತೆಗೆ ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ಕೋಮು ಸಾಮರಸ್ಯ ಕದಡಲು ಯತ್ನಿಸುತ್ತಿರುವ ಕೇಂದ್ರ ಸಚಿವರಾದ ಅನಂತಕುಮಾರ ಹೆಗಡೆ, ಮಾಜಿ ಸಚಿವರಾದ ಬಸನಗೌಡ ಪಾಟೀಲ್ ಯತ್ನಾಳ್, ಎಂ.ಪಿ. ರೇಣುಕಾಚಾರ್ಯ, ಶೋಭಾ ಕರಂದ್ಲಾಜೆ ವಿರುದ್ಧ ಐಪಿಸಿ ಕಲಂ 153 A ಪ್ರಕಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಹಾಗೂ ಅವರನ್ನು ತಕ್ಷಣ ಬಂಧಿಸಬೇಕುಮನವಿ ಸಲ್ಲಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT