ಮಂಗಳೂರು: ಕೊರೋನಾ ಸೋಂಕಿತ 21 ವರ್ಷದ ವ್ಯಕ್ತಿ ಗುಣಮುಖ; ಆಸ್ಪತ್ರೆಯಿಂದ ಡಿಸ್ಚಾರ್ಜ್
ಕೊರೋನಾ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 21 ವರ್ಷದ ವ್ಯಕ್ತಿ ಗುಣಮುಖವಾಗಿದ್ದು ಶುಕ್ರವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮಂಗಳೂರು: ಕೊರೋನಾ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 21 ವರ್ಷದ ವ್ಯಕ್ತಿ ಗುಣಮುಖವಾಗಿದ್ದು ಶುಕ್ರವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
21 ವರ್ಷದ ಯುವಕ ಡಿಸ್ಚಾರ್ಜ್ ಆಗುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೂ ಕೊರೋನಾದಿಂದ ಗುಣಮುಖರಾದವರ ಸಂಖ್ಯೆ 7ಕ್ಕೇರಿದೆ.
12 ಕೊರೋನಾ ಪಾಸಿಟಿವ್ ಕೇಸ್ ಗಳು ಈ ಜಿಲ್ಲೆಯಲ್ಲಿ ದಾಖಲಾಗಿದ್ದವು, ಅವರಲ್ಲಿ ಅರ್ಧದಷ್ಟು ಗುಣಮುಖರಾಗಿದ್ದಾರೆ.
ಮಾರ್ಚ್ 21 ರಂದು ದುಬೈನಿಂದ ಬಂದ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿತ್ತು. ಇತ್ತೀಚೆಗೆ ನಡೆದ ಪರೀಕ್ಷೆಯಲ್ಲಿ ಕೊರೋನಾ ನೆಗೆಟಿವ್ ಬಂದಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಗಳಲ್ಲಿ ನಿನ್ನೆ ಯಾವುದೇ ಹೊಸ ಪ್ರಕರಣಗಳು ಪತ್ತೆಯಾಗಿಲ್ಲ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.