ರಾಜ್ಯ

ನಿರಾಶ್ರಿತರ ಬಗ್ಗೆ ಸೂಕ್ತ ಪರಿಶೀಲನೆ ಮಾಡದ್ದಕ್ಕೆ ಬಿಬಿಎಂಪಿ ವಿರುದ್ಧ ಹೈಕೋರ್ಟ್ ಗರಂ

Manjula VN

ಬೆಂಗಳೂರು: ಲಾಕ್'ಡೌನ್ ಪರಿಣಾಮ ನಗರದಲ್ಲಿ ವಾಸ್ತವವಾಗಿ ಎಷ್ಟು ವಲಸೆ ಕಾರ್ಮಿಕರು, ನಿರಾಶ್ರಿತರು ಹಾಗೂ ಕೂಲಿ ಕಾರ್ಮಿಕರು ಆಶ್ರಯ ಇಲ್ಲದೆ ರಸ್ತೆ ಹಾಗೂ ಸರ್ಕಾರಿ ಜಾಗಗಳಲ್ಲಿ ಉಳಿದುಕೊಂಡಿದ್ದಾರೆ ಎಂಬುದನ್ನು ಬಿಬಿಎಂಪಿ ಸೂಕ್ತ ಪರಿಶೀಲನೆ ಮಾಡಿಲ್ಲ ಎಂದು ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. 

ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರದ ಮುಂಜಾಗ್ರತ ಕ್ರಮಗಳು ಮತ್ತು ಲಾಕ್'ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಅನಾನುಕೂಲತೆಗಳ ವಿಚಾರವಾಗಿ ಸಲ್ಲಿಸಲಾಗಿರುವ ಹಲವು ಸಾರ್ವಜನಿಕರ ಹಿತಾಸಕ್ತಿ ಅರ್ಜಿಗಲ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ನ್ಯಾಯಾಪೀಠ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿದೆ. 

ಅಲ್ಲದೆ, ಕೂಡಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳು ಮಧ್ಯಪ್ರವೇಶ ಮಾಡಿ ನಗರದಲ್ಲಿರುವ ನಿರಾಶ್ರಿತರು, ವಲಸೆ ಕಾರ್ಮಿಕರು, ಕೂಲಿ ಕಾರ್ಮಿಕರಿಗೆ ಮತ್ತು ನಿರ್ಗತಿಕರಿಗೆ ಆಶ್ರಯ ಕಲ್ಪಿಸುವ ಸಂಬಂಧ ನಿರ್ದೇಶನಗಳನ್ನು ಬಿಬಿಎಂಪಿಗೆ ನೀಡುವಂತೆ ತಿಳಿಸಿ ಈ ಸಂಬಂಧ ಕೈಗೊಂಡ ಕ್ರಮಗಳ ಬಗ್ಗೆ ಬಿಬಿಎಂಪಿ ಸೂಕ್ತ ವರದಿಯನ್ನು ಸಲ್ಲಿಸಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ.

SCROLL FOR NEXT