ಬೆಂಗಳೂರು ಸೀಲ್ ಡೌನ್ 
ರಾಜ್ಯ

ಬೆಂಗಳೂರಿನ ಇತರ ಪ್ರದೇಶಗಳನ್ನು ಸೀಲ್ ಡೌನ್ ಮಾಡುವ ಯೋಜನೆಯಿಲ್ಲ: ಬಿಬಿಎಂಪಿ ಆಯುಕ್ತ

ಬೆಂಗಳೂರಿನ ಎರಡು ವಾರ್ಡ್ ಗಳನ್ನು ಹೊರತುಪಡಿಸಿ ಇತರ ಪ್ರದೇಶಗಳನ್ನು ಸೀಲ್ ಡೌನ್ ಮಾಡುವ ಯಾವುದೇ ಯೋಜನೆಯಿಲ್ಲ. ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸ್ಪಷ್ಟಪಡಿಸಿದೆ.

ಬೆಂಗಳೂರು: ಬೆಂಗಳೂರಿನ ಎರಡು ವಾರ್ಡ್ ಗಳನ್ನು ಹೊರತುಪಡಿಸಿ ಇತರ ಪ್ರದೇಶಗಳನ್ನು ಸೀಲ್ ಡೌನ್ ಮಾಡುವ ಯಾವುದೇ ಯೋಜನೆಯಿಲ್ಲ. ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸ್ಪಷ್ಟಪಡಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್ , ಕೋವಿಡ್-19 ಪ್ರಕರಣಗಳು ಹೆಚ್ಚಿದ್ದರಿಂದ ಶುಕ್ರವಾರ ಪಾದರಾಯಪುರ ಮತ್ತು ಬಾಪೂಜಿನಗರ ವಾರ್ಡ್ ಗಳನ್ನು ಸೀಲ್ ಡೌನ್ ಮಾಡಲಾಗಿದೆ. ಆದರೆ, ಅದನ್ನು ಉಳಿದ ಪ್ರದೇಶಗಳಿಗೆ ವಿಸ್ತರಿಸುವ  ಯೋಜನೆಯಿಲ್ಲ. ಜನರು ವದಂತಿಗಳಿಗೆ ಕಿವಿಗೊಟ್ಟು ಭೀತಿಗೊಳಗಾಗಬಾರದು ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಪೊಲೀಸರು ಕಠಿಣವಾಗಿ ಲಾಕ್ ಡೌನ್ ಜಾರಿಗೊಳಿಸುತ್ತಿದ್ದಾರೆ. ಕೊಡಿಗೆಹಳ್ಳಿ, ವಿದ್ಯಾರಣ್ಯಪುರ ಮತ್ತು ಹೊರಮಾವಿನಲ್ಲಿ ಜನರು ವಾಹನಗಳಲ್ಲಿ ಸಂಚರಿಸುವುದನ್ನು ತಡೆಯಲು ಬ್ಯಾರಿಕೇಡ್ ಗಳನ್ನು ಹಾಕಲಾಗಿದೆ ಎಂದು ವಿವರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT