ಲಾಕ್ ಡೌನ್ ನಿಯಮ ಬ್ರೇಕ್: ಕೇರಳದಿಂದ ಅಕ್ರಮವಾಗಿ ಕರ್ನಾಟಕಕ್ಕೆ ಬಂದ 7 ಮಂದಿ ವಿರುದ್ಧ ಕೇಸ್!
ಮಾರಕ ಕೊರೋನಾ ವೈರಸ್ ಸೋಂಕು ಪ್ರಸರಣ ತಡೆಯುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಕೈಗೊಂಡಿರುವ ಲಾಕ್ ಡೌನ್ ನಿಯಮ ಮುರಿದು ಕೇರಳದಿಂದ ಕರ್ನಾಟಕಕ್ಕೆ ಆಗಮಿಸಿದ್ದ 7 ಮಂದಿಯ ವಿರುದ್ಧ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು: ಮಾರಕ ಕೊರೋನಾ ವೈರಸ್ ಸೋಂಕು ಪ್ರಸರಣ ತಡೆಯುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಕೈಗೊಂಡಿರುವ ಲಾಕ್ ಡೌನ್ ನಿಯಮ ಮುರಿದು ಕೇರಳದಿಂದ ಕರ್ನಾಟಕಕ್ಕೆ ಆಗಮಿಸಿದ್ದ 7 ಮಂದಿಯ ವಿರುದ್ಧ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕರ್ನಾಟಕ ಮತ್ತು ಕೇರಳದ ಗಡಿ ಭಾಗ ತಾಳಪಾಡಿ ಮೂಲಕ ಕರ್ನಾಟಕಕ್ಕೆ ಅಕ್ರಮವಾಗಿ ಪ್ರವೇಶ ಮಾಡಿದ್ದ ಒಂದೇ ಕುಟುಂಬದ ಏಳು ಮಂದಿ ವಿರುದ್ಧ ಇದೀಗ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ, ಮೂಲಗಳ ಪ್ರಕಾರ 48 ವರ್ಷದ ಯಾಕೂಬ್ ಎಂಬಾತ ಮತ್ತು ಆತನ ಕುಟುಂಬ ಸಮುದ್ರ ಮಾರ್ಗವಾಗಿ ತಾಳಪಾಡಿಗೆ ಬಂದಿದ್ದು, ಈ ವಿಚಾರ ತಿಳಿಯುತ್ತಿದ್ದಂತೆಯೇ ಅಲರ್ಟ್ ಆದ ಮಂಗಳೂರು ಪೊಲೀಸರು ಯಾಕೂಬ್ ಮತ್ತು ಅವರಿಗೆ ಸಮುದ್ರ ಮಾರ್ಗದಲ್ಲಿ ಬರಲು ನೆರವು ನೀಡಿದ್ದ ಶಕೀರ್ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಬಗ್ಗೆ ಬಜಪೆ ಪೊಲೀಸರು ಯಾಕೂಬ್ ಮತ್ತು ಆತನ ಕುಟುಂಬಸ್ಥರು, ಶಕೀರ್ ವಿರುದ್ಧ ಲಾಕ್ ಡೌನ್ ನಿಯಮ ಉಲ್ಲಂಘನೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯಾಕೂಬ್ ತನ್ನ ಕುಟುಂಬವನ್ನು ಅಪಾಯಕ್ಕೆ ಸಿಲುಕಿಸಿದ್ದು ಮಾತ್ರವಲ್ಲದೇ ಇತರೆ ಸಾರ್ವಜನಿಕರ ಪ್ರಾಣಕ್ಕೂ ಕುತ್ತು ತಂದಿದ್ದಾನೆ ಎಂದು ಪೊಲೀಸರು ಸ್ವಯಂ ಪ್ರೇರಿತ ದೂರಿನಲ್ಲಿ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ತನಿಖೆಯನ್ನು ಬಜ್ಪೆ ಪೊಲೀಸರು ನಡೆಸುತ್ತಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.