ಕರ್ನಾಟಕದಲ್ಲಿ ಕೊರೋನಾ 
ರಾಜ್ಯ

ರಾಜ್ಯದಲ್ಲಿ ಕೊರೋನಾ ಸೋಂಕಿನ ಸಂಖ್ಯೆ 215ಕ್ಕೇರಿಕೆ, 6 ಸಾವು

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 8 ಹೊಸ ಕೊರೋನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 215ಕ್ಕೇರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 8 ಹೊಸ ಕೊರೋನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 215ಕ್ಕೇರಿಕೆಯಾಗಿದೆ.

ಮೈಸೂರಿನಲ್ಲಿ ಮತ್ತೆ ಐದು ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ಮೈಸೂರಿನಲ್ಲಿ ಸೋಂಕಿತರ ಸಂಖ್ಯೆ 47ಕ್ಕೇರಿಕೆಯಾಗಿದೆ. ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ಅಂದರೆ 72 ಸೋಂಕಿನ ಪ್ರಕರಣಗಳು ವರದಿಯಾಗಿವೆ. ಹೊಸದಾಗಿ ಬಿಬಿಎಂಪಿ ವ್ಯಾಪ್ತಿಯ 10 ವರ್ಷದ ಮಗುವಿಗೂ  ಸೋಂಕು ತಗುಲಿರುವುದು ದೃಢಪಟ್ಟಿದೆ.

ಜ್ಯುಬಿಲಿಯೆಂಟ್ ಔಷಧ ಕಂಪನಿಯ ಸೋಂಕಿತ ಕಾರ್ಮಿಕರೊಂದಿಗೆ ಸಂಪರ್ಕ ಹೊಂದಿದ 46, 43, 27, 31, 26 ವರ್ಷದ ವ್ಯಕ್ತಿಗಳಲ್ಲಿ ಸೋಂಕು ದೃಢಪಟ್ಟಿದೆ. ಇದನ್ನು ಹೊರತುಪಡಿಸಿ, ಬಿಬಿಎಂಪಿ ವ್ಯಾಪ್ತಿಯ 32 ವರ್ಷದ ಪುರುಷ, ಬೀದರ್ ನ 50 ವರ್ಷದ ಮಹಿಳೆಯಲ್ಲಿ ಸೋಂಕು  ಕಾಣಿಸಿಕೊಂಡಿದೆ.

ಇಲ್ಲಿಯವರೆಗೆ ಆರು ಮಂದಿ ಸೋಂಕಿನಿಂದ ಮೃತಪಟ್ಟಿದ್ದು, 37 ಜನರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ