ಕಳ್ಳಭಟ್ಟಿ ತಯಾರಿಸುತ್ತಿದ್ದವನ ಬಂಧನ 
ರಾಜ್ಯ

ಕಳ್ಳಭಟ್ಟಿ ಕುಡಿದರೆ ಕೊರೋನಾ ಬರಲ್ಲ ಎಂದು ಸುಳ್ಳು ಸುದ್ದಿ ಹರಡಿ ಕಳ್ಳಭಟ್ಟಿ ತಯಾರಿಸುತ್ತಿದ್ದವನ ಬಂಧನ

ಕಳ್ಳಭಟ್ಟಿ ಕುಡಿದರೆ ಕೊರೊನಾ ಬರಲ್ಲವೆಂದು ಕಳ್ಳಭಟ್ಟಿ ತಯಾರಿಸುತ್ತಿದ್ದವನನ್ನು ಅಬಕಾರಿ ಪೊಲೀಸರು ಬಂಧಿಸಿರುವ ಘಟನೆ ಹನೂರು ತಾಲೂಕಿನ ದೊರೆದೊಡ್ಡಿ ಗ್ರಾಮದಲ್ಲಿ ನಡೆದಿದೆ.ಕಳ್ಳಭಟ್ಟಿ ಕುಡಿದರೆ ಕೊರೊನಾ ಬರಲ್ಲ ಎಂದು ಕಳ್ಳು ತಯಾರಿಸುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ.

ಚಾಮರಾಜನಗರ: ಕಳ್ಳಭಟ್ಟಿ ಕುಡಿದರೆ ಕೊರೊನಾ ಬರಲ್ಲವೆಂದು ಕಳ್ಳಭಟ್ಟಿ ತಯಾರಿಸುತ್ತಿದ್ದವನನ್ನು ಅಬಕಾರಿ ಪೊಲೀಸರು ಬಂಧಿಸಿರುವ ಘಟನೆ ಹನೂರು ತಾಲೂಕಿನ ದೊರೆದೊಡ್ಡಿ ಗ್ರಾಮದಲ್ಲಿ ನಡೆದಿದೆ.ಕಳ್ಳಭಟ್ಟಿ ಕುಡಿದರೆ ಕೊರೊನಾ ಬರಲ್ಲ ಎಂದು ಕಳ್ಳು ತಯಾರಿಸುತ್ತಿದ್ದವನನ್ನು  ಪೊಲೀಸರು ಬಂಧಿಸಿದ್ದಾರೆ. 

ಬಂಧಿತನನ್ನು ಭೀಮನಾಯ್ಕ ಎಂದು ಗುರುತಿಸಲಾಗಿದ್ದು, ಕಳ್ಳಭಟ್ಟಿ ಕುಡಿದರೆ ಕೊರೊನಾ ಬರಲ್ಲವೆಂದು ಬೆಲ್ಲದ ಕೊಳೆ, ಮರದ ಚಕ್ಕೆಯನ್ನು ಜಮೀನನಲ್ಲಿ ಶೇಖರಿಸಿದ್ದಾನೆ. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಕೊಳ್ಳೇಗಾಲ ಅಬಕಾರಿ ಸಿಪಿಐ ಮೀನಾ ನೇತೃತ್ವದ ತಂಡ ದಾಳಿ ನಡೆಸಿ ಮಾಲು  ವಶಕ್ಕೆ ಪಡೆದಿದೆ.

ಕಳೆದ ಮೂರೂವರೆ ವರ್ಷಗಳಿಂದ ಜಿಲ್ಲೆಯಲ್ಲಿ ಕಳ್ಳಭಟ್ಟಿ ಪ್ರಕರಣಗಳು ನಡೆದಿರಲಿಲ್ಲ. ಲಾಕ್​ಡೌನ್​​ನಿಂದ ಮದ್ಯಕ್ಕೆ ಎಣ್ಣೆಪ್ರಿಯರು ಪರದಾಡುತ್ತಿರುವುದರಿಂದ ಕೊರೋನಾ ನೆಪವೊಡ್ಡಿ ಕಳ್ಳಭಟ್ಟಿ ತಯಾರಿಕೆಗೆ ಆರೋಪಿ ಮುಂದಾಗಿದ್ದ ಎಂದು ತಿಳಿದುಬಂದಿದೆ. ಕಾರ್ಯಾಚರಣೆಯಲ್ಲಿ 90 ಲೀ.  ಬೆಲ್ಲದ ಕೊಳೆ, 6-7 ಚೀಲ ಮರದ ಚಕ್ಕೆಯನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.

ವರದಿ ಗುಳಿಪುರ ನಂದೀಶ ಎಂ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT