ಮಂಗಳೂರು: ಕರ್ತವ್ಯದಲ್ಲಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸಿದ್ದ, ಕರ್ತವ್ಯ ನಿರ್ವಹಿಸದಂತೆ ಅಡ್ಡಿ ಪಡಿಸಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ.
ಮಲ್ಲೂರು ನಿವಾಸಿ ವಾಸಂತಿ (45) ಎನ್ನುವವರು ಆರೋಗ್ಯ ಇಲಾಖೆಗೆ ಸಂಬಂಧಿಸಿದ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದಾಗ ಮಲ್ಲೂರ್ ಬದ್ರಿಯಾ ನಗರದ ನಿವಾಸಿಗಳಾದ ಇಸ್ಮಾಯಿಲ್ (45) ಮತ್ತು ಅಶ್ರಫ್ (32) ಎಂಬ ಎಸ್‌ಡಿಪಿಐ ಕಾರ್ಯಕರ್ತರು ಅವರನ್ನು ಬೆದರಿಸಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಈ ನಿಟ್ಟಿನಲ್ಲಿ ಮಂಗಳೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.