ಪ್ರಿಯಾಂಕ್ ಖರ್ಗೆ 
ರಾಜ್ಯ

ಚಿತ್ತಾಪುರ: 2 ವರ್ಷದ ಮಗುವಿಗೆ ಕೊರೋನಾ ಸೋಂಕು,ಕಟ್ಟೆಚ್ಚರ- ಪ್ರಿಯಾಂಕ್ ಖರ್ಗೆ

ಕಲಬುರಗಿ ಜಿಲ್ಲೆ ಚಿತ್ತಾಪುರ  ತಾಲೂಕಿನ ವಾಡಿ ಪಟ್ಟಣದ ಪಿಲಕಮ್ಮ ಪ್ರದೇಶದಲ್ಲಿ 2 ವರ್ಷದ ಮಗುವಿಗೆ ಕೊರೋನಾ ಸೋಂಕು ತಗುಲಿರುವುದು ಧೃಡಪಟ್ಟಿದೆ. 

ಚಿತ್ತಾಪುರ: ಕಲಬುರಗಿ ಜಿಲ್ಲೆ ಚಿತ್ತಾಪುರ  ತಾಲೂಕಿನ ವಾಡಿ ಪಟ್ಟಣದ ಪಿಲಕಮ್ಮ ಪ್ರದೇಶದಲ್ಲಿ 2 ವರ್ಷದ ಮಗುವಿಗೆ ಕೊರೋನಾ ಸೋಂಕು ತಗುಲಿರುವುದು ಧೃಡಪಟ್ಟಿದೆ. 

ತಾಲೂಕು ಅಧಿಕಾರಿಗಳು ಹಾಗೂ ಪುರಸಭೆ ಆಡಳಿತದೊಂದಿಗೆ ಶಾಸಕ ಪ್ರಿಯಾಂಕ್ ಖರ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮ ಗೊಳ್ಳಲು ಸೂಚಿಸಿದ್ದಾರೆ.  ಸಾರ್ವಜನಿಕರು ಭೀತಿಗೊಳಗಾಗುವ ಅಗತ್ಯವಿಲ್ಲ ಎಂದಿದ್ದಾರೆ. 

ಈ ಪ್ರದೇಶವನ್ನು ಸಂಪೂರ್ಣ ಸೀಲ್ ಡೌನ್ ಮಾಡಿ, ಅಲ್ಲಿನ ಜನರನ್ನು ಪರೀಕ್ಷೆಗೆ ಒಳಪಡಿಸಲಿದ್ದೇವೆ. ಎಲ್ಲ ಕೌನ್ಸಿಲರ್‌ಗಳು ಮತ್ತು ಸ್ಥಳೀಯ ಮುಖಂಡರೊಂದಿಗೆ ವೈಯಕ್ತಿಕವಾಗಿ ಮಾತನಾಡಿದ್ದೇನೆ ಮತ್ತು ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಲು ಅವರ ಸಹಕಾರ ನೀಡುವಂತೆ ಕೋರಿದ್ದೇನೆ. ಅಗತ್ಯ ವಸ್ತುಗಳನ್ನು ಸ್ಥಳೀಯವಾಗಿ ಸಿಗುವಂತೆ ಅಥವಾ ಮನೆ ಬಾಗಿಲಿಗೇ ಪೂರೈಸಲು ಕ್ರಮಕೈಗೊಳ್ಳಲಾಗುವುದ ಎಂದು ಪ್ರಿಯಾಂಕಾ ಖರ್ಗೆ ತಿಳಿಸಿದ್ದಾರೆ. 

ತಮ್ಮ ಹಾಗೂ ತಮ್ಮವರ ಸುರಕ್ಷತೆಗಾಗಿ ನಾಗರಿಕರೆಲ್ಲರೂ ಸೀಲ್ ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗಿ ವಿನಂತಿಸಿಕೊಳ್ಳುವುದಾಗಿ ಅವರು ಮನವಿ ಮಾಡಿಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT