ರಾಜ್ಯ

ರೈತರ ಉತ್ಪನ್ನಗಳನ್ನು ಸರ್ಕಾರ ಖರೀದಿಸಿ ಮಾರಾಟ ಮಾಡಲಿ, ನೇಕಾರರ ಸಂಕಷ್ಟಕ್ಕೆ ಸ್ಪಂದಿಸಿ:ಪ್ರತಿಪಕ್ಷ ನಾಯಕರ ಆಗ್ರಹ

Sumana Upadhyaya

ಬೆಂಗಳೂರು:ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಆಗಿರುವುದರಿಂದ ವಾಹನ ಸಂಚಾರಗಳಿಲ್ಲದೆ ರೈತರ ಉತ್ಪನ್ನಗಳನ್ನು ಸರಿಯಾದ ಸಮಯಕ್ಕೆ ಮಾರುಕಟ್ಟೆಗೆ ತರಲು ಸಾಧ್ಯವಾಗುತ್ತಿಲ್ಲ, ತಾವು ಬೆಳೆದ ಉತ್ಪನ್ನಗಳು ಹಾಳಾಗುತ್ತಿವೆ ಎಂದು ರೈತರು ಕಣ್ಣೀರು ಹಾಕುತ್ತಿದ್ದಾರೆ, ಕೆಲವೆಡೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳೂ ನಡೆದಿವೆ.

ಇನ್ನೊಂದೆಡೆ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ತರಕಾರಿ, ಹಣ್ಣು, ಹಾಲು ಸರಿಯಾಗಿ ಸಿಗುತ್ತಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ರೈತರ ಉತ್ಪನ್ನಗಳನ್ನು ಸರ್ಕಾರವೇ ಖರೀದಿಸಿ ಮಾರಾಟ ಮಾಡಲು ತಡಮಾಡದೇ ಕ್ರಮ ಕೈಗೊಳ್ಳಬೇಕು. ಲಾಕ್ ಡೌನ್ ಮುಂದುವರಿಕೆ ನಿಚ್ಚಳವಾಗಿರುವ ಹಿನ್ನೆಲೆಯಲ್ಲಿ ತುರ್ತು ಕಾರ್ಯೋನ್ಮುಖವಾಗಬೇಕೆಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಅಲ್ಲದೆ ರಾಜ್ಯ ಸರ್ಕಾರ ತಕ್ಷಣವೇ ರೈತರಿಗೆ ಪರಿಹಾರ ಪ್ಯಾಕೆಜ್ ಗಳನ್ನು ಬಿಡುಗಡೆ ಮಾಡಿ ನೇರ ಲಾಭ ವರ್ಗಾವಣೆ ಮಾಡಬೇಕೆಂದು, ಈ ಮೂಲಕ ರೈತರ ಆತ್ಮಹತ್ಯೆ ಸನ್ನಿವೇಶಗಳನ್ನು ತಪ್ಪಿಸಬೇಕೆಂದು ಒತ್ತಾಯಿಸಿದ್ದಾರೆ.

SCROLL FOR NEXT