ರವಿ ಚೆನ್ನಣ್ಣನವರ್, ಲಕ್ಷ್ಮಣ್ ಸವದಿ 
ರಾಜ್ಯ

ರವಿ ಚೆನ್ನಣ್ಣನವರ್ ಸಾರಿಗೆ ಇಲಾಖೆಯಲ್ಲಿ ಹಸ್ತಕ್ಷೇಪ ನಡೆಸಿಲ್ಲ: ಡಿಸಿಎಂ ಸವದಿ

ಹಿರಿಯ ಪೊಲೀಸ್ ಅಧಿಕಾರಿ ರವಿ ಚೆನ್ನಣ್ಣನವರ್ ಸಾರಿಗೆ ಇಲಾಖೆಯಲ್ಲಿ ಹಸ್ತಕ್ಷೇಪ ನಡೆಸಿಲ್ಲ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಬೆಂಗಳೂರು: ಅತ್ತಿಬೆಲೆ ಚೆಕ್ ಪೋಸ್ಟ್ ಬಳಿ ಇತ್ತೀಚೆಗೆ ಸಂಭವಿಸಿದ ಒಂದು ಘಟನೆಯ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಯಾದ ರವಿ ಚನ್ನಣ್ಣನವರ್ ಅವರ ವಿರುದ್ಧ ತಾವು  ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದೇನೆ ಎಂಬುದಾಗಿ ಕೆಲವು ಸಾಮಾಜಿಕ ಮಾಧ್ಯಮಗಳಲ್ಲಿ  ವರದಿಯಾಗಿರುವುದು ಸತ್ಯಕ್ಕೆ ದೂರವಾದ ಸಂಗತಿ ಎಂದು ಸಾರಿಗೆ ಇಲಾಖೆ ಜವಾಬ್ದಾರಿ ಹೊತ್ತಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ

ಸುದ್ದಿಗಾರರ ಜತೆ ಮಾತನಾಡಿದ ಅವರು, ರವಿಚನ್ನಣ್ಣವರ್ ಒಳ್ಳೆಯ  ಅಧಿಕಾರಿ ಎಂಬುದನ್ನು ನಾನು ಬಲ್ಲೆ. ಅವರು ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆಯೇ  ವಿನ: ಸಾರಿಗೆ  ಇಲಾಖೆಯಲ್ಲಿ ಹಸ್ತಕ್ಷೇಪ ನಡೆಸಿದ್ದು ನನ್ನ ಗಮನಕ್ಕೆ  ಬಂದಿಲ್ಲ ಮತ್ತು ಈ ಬಗ್ಗೆ ಯಾವುದೇ ಸಂಘಟನೆಗಳು ನನ್ನಲ್ಲಿ ಆಕ್ಷೇಪ ವ್ಯಕ್ತಪಡಿಸಿಲ್ಲ ಎಂದರು.

ಹೀಗಿರುವಾಗ ವಿನಾಕಾರಣ ಸದರಿ ಅಧಿಕಾರಿ ವಿರುದ್ಧ ನಾನು ಮುಖ್ಯಮಂತ್ರಿಗಳಿಗೆ ದೂರು ನೀಡುವಂತಹ  ಪ್ರಶ್ನೆ ಉದ್ಭವಿಸುವುದಿಲ್ಲ. ಆದ್ದರಿಂದ ಸಾರ್ವಜನಿಕರಿಗೆ ತಪ್ಪು ಸಂದೇಶ ಹೋಗಬಾರದು ಎಂಬ ಹಿನ್ನೆಲೆಯಲ್ಲಿ ನಾನು ಈ ಸ್ಪಷ್ಟೀಕರಣವನ್ನು ನೀಡುತ್ತಿದ್ದೇನೆ ಎಂದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT