ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾವೈರಸ್ ಪೀಡಿತ ರಾಜ್ಯದ 19 ನೇ ಜಿಲ್ಲೆ ವಿಜಯಪುರ

60 ವರ್ಷದ ಮಹಿಳೆಯೊಬ್ಬರಲ್ಲಿ ಕೋವಿಡ್-19 ಸೋಂಕು ದೃಢಪಡುವುದರೊಂದಿಗೆ ವಿಜಯಪುರ ಮಾರಕ ಕೊರೋನಾವೈರಸ್ ಪೀಡಿತ 19ನೇ ಜಿಲ್ಲೆಯಾಗಿ ಹೊರಹೊಮ್ಮಿದೆ.

ವಿಜಯಪುರ: 60 ವರ್ಷದ ಮಹಿಳೆಯೊಬ್ಬರಲ್ಲಿ ಕೋವಿಡ್-19 ಸೋಂಕು ದೃಢಪಡುವುದರೊಂದಿಗೆ ವಿಜಯಪುರ ಮಾರಕ ಕೊರೋನಾವೈರಸ್ ಪೀಡಿತ 19ನೇ ಜಿಲ್ಲೆಯಾಗಿ ಹೊರಹೊಮ್ಮಿದೆ.

ರಾಜ್ಯದಲ್ಲಿ ಇಂದು 11 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ರಾಜ್ಯದಲ್ಲಿ ಒಟ್ಟಾರೇ 223 ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ಒಂದು ಪ್ರಕರಣ ವಿಜಯಪುರ ನಗರದಿಂದ ವರದಿಯಾಗಿದೆ. 60 ವರ್ಷದ ಮಹಿಳೆ ತೀವ್ರ ಉಸಿರಾಟ ತೊಂದರೆ ಎದುರಿಸುತ್ತಿರುವುದಾಗಿ  ಆರೋಗ್ಯ ಬುಲೆಟಿನ್ ನಲ್ಲಿ ಮಾಹಿತಿ ನೀಡಲಾಗಿದೆ. 

ರಾಜ್ಯಸರ್ಕಾರದ ನಿರ್ದೇಶನದಂತೆ ಜಿಲ್ಲಾ ಆಸ್ಪತ್ರೆಯನ್ನು ಕೋವಿಡ್-19 ಆಸ್ಪತ್ರೆಯನ್ನಾಗಿ ಜಿಲ್ಲಾಡಳಿತ ಪರಿವರ್ತಿಸಿದ್ದು, ಎಲ್ಲಾ ರೋಗಿಗಳನ್ನು ಬಿಎಲ್ ಡಿಇ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. 

ಶನಿವಾರ ರಾತ್ರಿಯಿಂದಲೂ ಐಸೋಲೇಷನ್ ನಲ್ಲಿರುವ 25 ಜನರ ಮೇಲೆ ಆರೋಗ್ಯ ಇಲಾಖೆ ನಿಗಾ ವಹಿಸಿದೆ. 
ಎರಡು ಪ್ರದೇಶಗಳು ಸಂಪೂರ್ಣವಾಗಿ ನಿಷೇಧಿಸಿರುವುದರಿಂದ ಹಾಲು ಮತ್ತು ತರಕಾರಿಗಳು ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳನ್ನು  ಮನೆ ಬಾಗಿಲಿಗೆ ತಲುಪಿಸುವ ಬಗ್ಗೆ ಜಿಲ್ಲಾಡಳಿತ ಜನರಿಗೆ ಭರವಸೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ