ರಾಜ್ಯ

ಹುಬ್ಬಳ್ಳಿ ಬಳಿಕ ವಿಜಯಪುರದಲ್ಲೂ ಇಬ್ಬರು ಪೊಲೀಸರಿಗೆ ಹೋಂ ಕ್ವಾರಂಟೈನ್!

Srinivasamurthy VN

ವಿಜಯಪುರ: ಹುಬ್ಬಳ್ಳಿ ಬೆನ್ನಲ್ಲೇ ವಿಜಯಪುರದಲ್ಲೂ ಸೋಂಕಿತರ ಮನೆಗೆ ತೆರಳಿ ಮಾಹಿತಿ ಕಲೆಹಾಕಿದ್ದ ಇಬ್ಬರು ಪೊಲೀಸರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ.

ವಿಜಯಪುರದ ಚಪ್ಪರ್‌ಬಂದ್‌ ಪ್ರದೇಶದಲ್ಲಿ ಕೋವಿಡ್‌–19 ದೃಢಪಟ್ಟಿರುವ ಮಹಿಳೆ (ಪೇಷೆಂಟ್ ನಂಬರ್ 221) ಮನೆಗೆ ಮಾಹಿತಿ ಸಂಗ್ರಹಿಸಲು ತೆರಳಿದ್ದ ಇಬ್ಬರು ಪೊಲೀಸರನ್ನು ಹೋಂಕ್ವಾರಂಟೈನ್‌ನಲ್ಲಿ ಇಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ  ಅನುಮಪ್‌ ಅಗರವಾಲ್‌, 'ಕೊರೊನಾ ಸೋಂಕಿತರ ಮನೆಗೆ ತೆರಳಿ ಕುಟುಂಬದವರ ಮಾಹಿತಿ ಸಂಗ್ರಹಿಸಿದ್ದ ಗೋಳಗುಮ್ಮಟ ಠಾಣೆ ಪಿಎಸ್‌ಐ ಮತ್ತು ಒಬ್ಬ ಕಾನ್‌ಸ್ಟೆಬಲ್‌ ಅವರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಹೋಂ ಕ್ವಾರಂಟೈನ್‌ನಲ್ಲಿ ಇಡಲಾಗಿದೆ' ಎಂದು ತಿಳಿಸಿದರು.

ಕೊರೋನಾ ವೈರಸ್ ಪೀಡಿತ ಮಹಿಳೆ ಮತ್ತು ಆಕೆಯ ಕುಟುಂಬ ಸದಸ್ಯರ ಕುರಿತು ಮಾಹಿತಿ ಪಡೆಯಲು ಹೋಗಿದ್ದ ಗೋಳಗುಮ್ಮಟ ಠಾಣೆಯ ಪಿಎಸ್‌ಐ ಹಾಗೂ ಇಬ್ಬರು ಪೇದೆಗಳನ್ನು ಹೋಂ ಕ್ವಾರಂಟೈನ್‌ಗೆ ಗುರಿಪಡಿಸಲಾಗಿದೆ. ಕೊರೋನಾ ಪೀಡಿತ ಮಹಿಳೆಯ ಮನೆಗೆ ಭೆಟಿ ನೀಡಿದ್ದ  ಪಿಎಸ್‌ಐ ಹಾಗೂ ಇಬ್ಬರು ಪೇದೆಗಳಿಗೆ ಮನೆಯಲ್ಲೇ ಇರಲು ಜಿಲ್ಲಾ ಪೊಲೀಸ್ ಇಲಾಖೆ ಸೂಚನೆ ನೀಡಿದ್ದು, ಅವರ ಆರೋಗ್ಯದ ಮೇಲೆ ತೀವ್ರ ನಿಗಾ ಇರಿಸಿದೆ. ಈ ಮಧ್ಯೆ ವಿಜಯಪುರ ನಗರದಲ್ಲಿ 6 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಗುಮ್ಮಟನಗರಿಯ  ಜನರನ್ನು ಬೆಚ್ಚಿ ಬೀಳಿಸಿದೆ. ಒಂದೇ ದಿನದಲ್ಲಿ ಆರು ಪ್ರಕರಣಗಳು ದಾಖಲಾಗಿರುವುದರಿಂದ ಜಿಲ್ಲಾ ಆರೋಗ್ಯ ಇಲಾಖೆಯನ್ನು ಸರ್ವಸನ್ನದ್ಧ ಸ್ಥಿತಿಯಲ್ಲಿ ಇಡಲಾಗಿದೆ. 

SCROLL FOR NEXT