ರಾಜ್ಯ

ಅಂತಿಮ ಸೆಮಿಸ್ಟರ್ ಹೊರತುಪಡಿಸಿ ಉಳಿದ ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಡ್ತಿ ನೀಡಿ: ಕಾರ್ಯಪಡೆಯಿಂದ ಸಲಹೆ

ಅಂತಿಮ ಸೆಮಿಸ್ಟರ್ ಹೊರತುಪಡಿಸಿ ಉಳಿದೆಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ಬಡ್ತಿ ನೀಡಿ ಎಂದು ಕಾರ್ಯಪಡೆ ಸಮಿತಿ ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವಥ ನಾರಾಯಣ ಅವರಿಗೆ ಸಲಹೆ ನೀಡಿದೆ.

ಬೆಂಗಳೂರು:ಅಂತಿಮ ಸೆಮಿಸ್ಟರ್ ಹೊರತುಪಡಿಸಿ ಉಳಿದೆಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ಬಡ್ತಿ ನೀಡಿ ಎಂದು ಕಾರ್ಯಪಡೆ ಸಮಿತಿ ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವಥ ನಾರಾಯಣ ಅವರಿಗೆ ಸಲಹೆ ನೀಡಿದೆ.

ಇಲ್ಲಿಯವರೆಗೆ ನಿಗದಿತ ಶೈಕ್ಷಣಿಕ ವರ್ಷದ ಪ್ರಕಾರ ಪದವಿ ತರಗತಿಗಳಿಗೆ ಏಪ್ರಿಲ್ 27ರಿಂದ ಮತ್ತು ಸ್ನಾತಕೋತ್ತರ ಪದವಿಗಳಿಗೆ ಮೇ 8ರಿಂದ ವಿಶ್ವವಿದ್ಯಾಲಯ ಮಟ್ಟದಲ್ಲಿ ಪರೀಕ್ಷೆಗಳು ಆರಂಭವಾಗುತ್ತವೆ.

ಈ ವರ್ಷ ಕೋವಿಡ್-19ನಿಂದ ಲಾಕ್ ಡೌನ್ ನಿಂದಾಗಿ ಎಲ್ಲಾ ವಲಯಗಳ ಕಾರ್ಯಚಟುವಟಿಕೆ ಮೇಲೆ ಬಿಸಿ ತಟ್ಟಿದ್ದು ಇನ್ನು ಮುಂದೆ ಪರೀಕ್ಷೆಗಳನ್ನು ಹೇಗೆ ನಡೆಸುವುದು ಎಂಬ ಬಗ್ಗೆ ಪರಿಶೀಲನೆ ನಡೆಸಲು ಯುಜಿಸಿ ತಜ್ಞರ ಸಮಿತಿಯೊಂದನ್ನು ರಚಿಸಿದೆ. ಯುಜಿಸಿಯ ಶಿಫಾರಸುಗಳನ್ನು ನೋಡಿಕೊಂಡು ಅದರಂತೆ ಅಳವಡಿಸಲಾಗುವುದು ಎಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿಯ ಕಾರ್ಯಕಾರಿ ನಿರ್ದೇಶಕ ಎಸ್ ಎ ಕೊರಿ ಉಪ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ವರದಿಯಲ್ಲಿ ಹೇಳಿದ್ದಾರೆ.

ತರಗತಿಗಳು ಪುನರಾರಂಭಗೊಂಡ ನಂತರ ಎಲ್ಲಾ ವಿದ್ಯಾರ್ಥಿಗಳನ್ನು ಸಮಾಲೋಚನೆ ನಡೆಸಬೇಕು ಎಂದು ಸಹ ಸಮಿತಿ ಸಚಿವರಿಗೆ ಶಿಫಾರಸು ಮಾಡಿದೆ.

ಲಾಕ್ ಡೌನ್ ಮುಗಿದರೆ ಮೇ ಎರಡನೇ ವಾರದಲ್ಲಿ ಪರೀಕ್ಷೆ ನಡೆಸುವಂತೆ ಸಮಿತಿ ಸಚಿವರಿಗೆ ಸೂಚಿಸಿದೆ. ರಾಜ್ಯದಲ್ಲಿರುವ 32 ವಿಶ್ವವಿದ್ಯಾಲಯಗಳ ಉಪ ಕುಲಪತಿಗಳೊಂದಿಗೆ ಸಂವಾದ ನಡೆಸಿದ ಸಮಿತಿ ಸದಸ್ಯರು ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ