ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ರಾಜ್ಯದಲ್ಲಿ 11 ಹೊಸ ಕೋವಿಡ್ ಪ್ರಕರಣ, ಸೋಂಕಿತರ ಸಂಖ್ಯೆ 258ಕ್ಕೆ ಏರಿಕೆ, ಒಟ್ಟು 9 ಸಾವು

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 11 ಹೊಸ ಪ್ರಕರಣಗಳು ಪತ್ತೆಯಾಗಿವೆ. ಮೂರು ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರಿಂದ ಸೋಂಕಿತರ ಸಂಖ್ಯೆ 258ಕ್ಕೇರಿಕೆಯಾಗಿದ್ದು, 9 ಮಂದಿ ಮೃತಪಟ್ಟಂತಾಗಿದೆ.

ಸಂಗ್ರಹ ಚಿತ್ರ
Manjula VN
Updated On : 14 Apr 2020, 1:50 pm

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 11 ಹೊಸ ಪ್ರಕರಣಗಳು ಪತ್ತೆಯಾಗಿವೆ. ಮೂರು ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರಿಂದ ಸೋಂಕಿತರ ಸಂಖ್ಯೆ 258ಕ್ಕೇರಿಕೆಯಾಗಿದ್ದು, 9 ಮಂದಿ ಮೃತಪಟ್ಟಂತಾಗಿದೆ. 

ಕಲಬುರಗಿಯ 55 ವರ್ಷದ ವೃದ್ಧ, ಬೆಂಗಳೂರು ನಗರದ 65 ವರ್ಷದ ವೃದ್ಧ, ವಿಜಯಪುರದ 69 ವರ್ಷದ ವೃದ್ಧ ಸೋಂಕಿಗೆ ಬಲಿಯಾಗಿದ್ದಾರೆ. 

ಬಾಗಲಕೋಟೆಯ 43 ವರ್ಷದ ಪುರುಷ ಮತ್ತು 32 ವರ್ಷದ ಮಹಿಳೆ, ಚಿಕ್ಕಬಳ್ಳಾಪುರದ 65 ವರ್ಷದ ವೃದ್ಧ, ಬಾಗಲಕೋಟೆಯ 39 ವರ್ಷದ ಮಹಿಳೆ, ಬೆಂಗಳೂರು ನಗರದ 65 ವರ್ಷದ ವೃದ್ಧ, ಹಿಂದುಪುರದಿಂದ ದ್ವಿಚಕ್ರವಾಹನದಲ್ಲಿ ಪ್ರಯಾಣ ಮಾಡಿದ ಬೆಂಗಳೂರಿನ 26 ವರ್ಷದ ವ್ಯಕ್ತಿ, ಕಲಬುರಗಿಯ 10 ವರ್ಷದ ಬಾಲಕಿ, 51ವರ್ಷದ ವೃದ್ಧ, 35 ವರ್ಷದ ಮಹಿಳೆ, ವಿಜಯಪುರದ 69 ವರ್ಷದ ವೃದ್ಧ, ಬೆಳಗಾವಿಯ 33 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. 

Advertisement

Advertisement

ಇದರಿಂದ ಬೆಂಗಳೂರು ನಗರದಲ್ಲಿ 80, ಮೈಸೂರಿನಲ್ಲಿ 48, ಬೆಳಗಾವಿಯಲ್ಲಿ 18, ಕಲಬುರಗಿಯಲ್ಲಿ 16 ಪ್ರಕರಣಗಳು ಪತ್ತೆಯಾಗಿವೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement